;

ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ…!!!

ಚಿತ್ರದುರ್ಗ, ಆಗಸ್ಟ್ 16: ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಪ್ರಮುಖ ಆರೋಪದ ಮೇಲೆ ಸ್ವಾಮೀಜಿಗೆ ಸ್ಥಳೀಯರು ಸರಿಯಾಗಿ ಥಳಿಸಿದ್ದಾರೆ.

ಬಳ್ಳಾರಿ ಮೂಲದ ಮಹಿಳೆಯ ಸಂಬಂಧಿಕರು ಈ ಹಲ್ಲೆಯನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ. ಸ್ವಾಮೀಜಿ ವಾಮಾಚಾರ ಮತ್ತು ಅನಾರೋಗ್ಯ ನಿವಾರಣೆ ಮಾಡುವ ನೆಪದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ದೂರುಗಳೂ ಈ ಹಿಂದೆಯೇ ಇದ್ದವು. ಈ ಆರೋಪಗಳು ಸಾಬೀತಾಗುವ ಮೊದಲೇ, ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಘಟನೆ ನಡೆದು, ಅದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಹಿಳೆಯ ಸಂಬಂಧಿಕರು ಜಮ್ಮಣ್ಣ ಸ್ವಾಮೀಜಿಯವರನ್ನು ಭೇಟಿ ಮಾಡಲು ಹೋಗಿದ್ದಾಗ, ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ವಿಷಯ ತಿಳಿದ ಕೂಡಲೇ ಆಕೆಯ ಸಂಬಂಧಿಕರು ಸ್ವಾಮೀಜಿ ಮೇಲೆ ಹಲ್ಲೆ ನಡೆಸಿದ್ದಾರೆ. ಇಂತಹ ಘಟನೆಗಳು ಸಮಾಜದಲ್ಲಿ ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತವೆ. ಸಮಾಜದ ಭಾವನೆಗಳ ಜೊತೆ ಆಟವಾಡುವವರ ವಿರುದ್ಧ ಸ್ಥಳೀಯರು ರೊಚ್ಚಿಗೆದ್ದು ನ್ಯಾಯ ಒದಗಿಸಲು ಮುಂದಾಗಿದ್ದಾರೆ…

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;