;

ಗ್ರಾಮಪಂಚಾಯಿತಿ ಗ್ರಂಥಾಲಯದ ವತಿಯಿಂದ ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಕಾರ್ಯಕ್ರಮ ನಡೆಯಿತು…

ವರದಿ. ವಿರೇಶ್ ಎಚ್ಚರಿಕೆ ಪತ್ರಿಕಾ ವರದಿಗಾರ

ದಿನಾಂಕ 15 -01-2021 ನೇ ಶುಕ್ರವಾರ ನಡೆದ ಗ್ರಾಮ ಪಂಚಾಯಿತಿ ಗ್ರಂಥಾಲಯದ ವತಿಯಿಂದ ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಗ್ರಾಮ ಸಭೆ
ಹೊಸಹಳ್ಳಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು .
ಮಕ್ಕಳ ಮಾರಾಟ ಮತ್ತು ಸಾಗಾಣಿಕೆ ತಡೆ ಕುರಿತು
ಸಪ್ತಾಹ ನಡೆಸಲಾಯಿತು. ಶಾಲಾ ಮಕ್ಕಳಿಂದ ಮಕ್ಕಳ ಕಳ್ಳ ಸಾಗಾಣಿಕೆ, ಜಾಲದಲ್ಲಿ ಸಿಲುಕಿಕೊಂಡಿರುವ ಸ್ಥಿತಿಗತಿ ಮಕ್ಕಳು ಕಾಣೆಯಾದರೆ ತಕ್ಷಣ ದೂರು ನೀಡುವುದು,ಕುರಿತು
ಪ್ರೌಢ ಶಾಲಾ ಮಕ್ಕಳಿಂದ ಮತ್ತು ಹಿರಿಯ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಕಿರುಚಿತ್ರ ಪ್ರದರ್ಶನ ನೀಡಲಾಯಿತು.
ಸಪ್ತಾಹದ ಸ್ವವಿವರವನ್ನು ಅಂಗನವಾಡಿ ಮೇಲ್ವಿಚಾರಕರಾದ ತಮಶ್ವಿನಿ ರವರು ತಿಳಿಸಿದರು. ಪ್ರೌಢ ಶಾಲೆಯ ಶಿಕ್ಷಕರಾದ ಬಸವನಗೌಡ ಇವರು ಬಾಲ್ಯವಿವಾಹ ಮತ್ತು ಮಕ್ಕಳ ಸಾಗಾಣಿಕೆ ಬಗ್ಗೆ ತಿಳಿಸಿ, ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಪಡೆದು ಓದುವ ಬಗ್ಗೆ ಮಾಹಿತಿ ತಿಳಿಸಿದರು. ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಾದ ವಿನಯ್ ಕುಮಾರ್ ಇವರು ಮಾನವ ಕಳ್ಳಸಾಗಣೆಕೆ ತಡೆ ಕಾಯ್ದೆ ಕುರಿತು ಮಾತನಾಡಿದರು. ಗ್ರಂಥಾಲಯ ಮೇಲ್ವಿಚಾರಕರಾದ ಸಿ ಬಿ . ಮಲ್ಲಿಕಾರ್ಜುನಚಾರಿ ಇವರು 6 ವರ್ಷದಿಂದ 18 ವರ್ಷದ ಒಳಗಿನ ಮಕ್ಕಳಿಗೆ ಗ್ರಂಥಾಲಯ ಸದಸ್ಯತ್ವ ನೋಂದಣಿ ಬಗ್ಗೆ ಮತ್ತು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ಪಡೆದು ಓದಿ ಹಿಂದಿರುಗಿಸುವ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂಎಲ್ಲಾ ಶಾಲಾ ಮಕ್ಕಳು ಭಾಗವಹಿಸಿದ್ದರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಊರಿನ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಶಿಕ್ಷಕರಾದ ಪ್ರಕಾಶ ಗೌಡ ಇವರು ನಿರೂಪಿಸಿದರು ಮತ್ತು  ವಂದನಾರ್ಪಣೆ ಮಾಡಿದರು. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;