ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ >ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಸುಧಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.< ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ತಾಲೂಕು ವೈದ್ಯಾಧಿ ಕಾರಿ ಡಾ.ಸುಧಾ ಕೋವಿಡ್ -19 ಲಸಿಕೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದರು. ಅಭಿಯಾನದ ಪ್ರಾರಂಭದ ದಿನ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗೆ ಮಾತ್ರ ಲಸಿಕೆ ನೀಡಲಾಗಿದ್ದು, ಒಟ್ಟು 98 ಮಂದಿ ಲಸಿಕೆ ಪಡೆಯಲು ನೋಂದಣಿಯಾಗಿದ್ದಾರೆ. ಲಸಿಕೆ ಪಡೆದವರನ್ನು ಕ್ಷಣ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ನೀಡಿ ಕಳಿಸಲಾಯಿತು. ಒಟ್ಟು 120 ಡೋಸ್ ಲಸಿಕೆ ಸರಬರಾಜು ಆಗಿದೆ. ಆಸ್ಪತ್ರೆಯಲ್ಲಿ ದಾಸ್ತಾನು ಮಾಡಲಾಗಿದೆ. ಸಂದರ್ಭದಲ್ಲಿ ಮಾತನಾಡಿದ ತಾಲೂಕು ವೈದ್ಯಾಧಿಕಾರಿ ಡಾ.ಸುಧಾ ಮಾತನಾಡಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಟ್ಟು 98 ಸಿಬ್ಬಂದಿ ನೋಂದಣಿಯಾಗಿದ್ದಾರೆ. ನೋಂದಣಿಯಾಗಿರುವ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ. ಒಂದು ವೇಳೆ ಲಸಿಕೆ ಪಡೆಯಲು ಇಷ್ಟವಿಲ್ಲದವರು ಹೇಳಿಕೆ ಪತ್ರ ನೀಡಬೇಕು ಎಂದು ತಿಳಿಸಲಾಗಿದೆ ಎಂದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
