ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಹಂಚಿಕೆಯಲ್ಲಿ ರೊಟೇಷನ್ ಪದ್ದತಿಯನ್ನು ಅನುಸರಿಸಿ ಪಾರದರ್ಶಕವಾಗಿ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ಪಟ್ಟಣದ ಗುರುಭವನದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಆಯ್ಕೆಯಲ್ಲಿ ರೊಟೇಷನ್ ಪದ್ಧತಿಯನ್ನು ಅನುಸರಿಸಲಾಗಿದ್ದು, ಚುನಾಯಿತ ಸದಸ್ಯರ ಸಮ್ಮುಖದಲ್ಲಿ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಯಾವುದೇ ಲೋಪಗಳು ಜರುಗದಂತೆ ಎಲ್ಲ ವರ್ಗಕ್ಕೂ ಸಾಮಾಜಿಕ ನ್ಯಾಯದ ಅಡಿಯಲ್ಲಿ ಮೀಸಲಾತಿ
ಹಂಚಿಕೆ ಮಾಡಲಾಗಿದೆ. ಇದರಲ್ಲಿ ಲೋಪಗಳು
ಎನಿಸಿದರೆ ಕಾನೂನು ಮೊರೆ ಹೋಗಬಹುದು.
ತಾಲೂಕಿನ 16 ಗ್ರಾಮ ಪಂಚಾಯಿತಿಗಳಲ್ಲಿ 8
ಪಂಚಾಯಿತಿಗಳಲ್ಲಿ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ, 8 ಸ್ಥಾನ ಸಾಮಾನ್ಯವಾಗಿದೆ. ಅದರಲ್ಲಿ ಅನುಸೂಚಿತ ಜಾತಿ 4, ಅನುಸೂಚಿತ ಪಂಗಡ 8, ಸಾಮಾನ್ಯ 4 ಸ್ಥಾನಗಳೆಂದು ವರ್ಗಿಕರಿಸಲಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಬಾಲಕೃಷ್ಣ ಉಪ
ವಿಭಾಗಾಧಿಕಾರಿ ನಾಗರಾಜ, ತಹಸೀಲ್ದಾರ್ ಮಲ್ಲಿಕಾರ್ಜುನ, ತಾಪಂ ಈ.ಓ.ಪ್ರಕಾಶ, ಚುನಾವಣಾ ತಹಸೀಲ್ದಾರ್ ಸಂತೋಷ ಕುಮಾರ್ ಇದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
