ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಇಂದು 26.01.2021ರಂದು 72ನೇ ಗಣ ರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಬಿಜೆಪಿ ಮಂಡಲದ ಅಧ್ಯಕ್ಷರಾದ ಡಾ” ಪಿ ಎಂ ಮಂಜುನಾಥ್ ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ನಮನ ಸಲ್ಲಿಸಲಾಯಿತು. ಸಂವಿಧಾನ ಶಿಲ್ಪಿ ಡಾ|| ಬಿ ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಗುಚ್ಛ ಅರ್ಪಿಸಿ ರಾಷ್ಟ್ರಧ್ವಜಕ್ಕೆ ಗೌರವ ನಮನ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಎ.ಬಿ ಪ್ರಭಾಕರ್, ನಗರ ಘಟಕದ ಅಧ್ಯಕ್ಷರಾದ ಕಿರಣ್ ಗಾಯವಾಡ್, ಹಾಗೂ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಪಿ ಲಕ್ಷ್ಮಣ್, ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಶೋಭಾ-ಪೃಥ್ವಿರಾಜ್, ಸದಸ್ಯರಾದ ಮಂಜುನಾಥ್, ಲಕ್ಷ್ಮೀದೇವಿ, ಭೀಮಣ್ಣ, ಸವಿತಾ, ಅರ್ಜುನ್, ಬಿಜೆಪಿಯ ಪ್ರಮುಖರು ಭಾಗವಹಿಸಿದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
