ವರದಿ. ನಳಿನಿ ಬೆಂಗಳೂರು
ಬೆಂಗಳೂರು:ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ ಮನಗುಳಿ ನಿಧನರಾಗಿದ್ದಾರೆ.
ಮನಗುಳಿ ರವರಿಗೆ 85 ವರ್ಷ ವಯಸ್ಸಾಗಿತ್ತು ಇತೀಚೆಗೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಎರಡು ಬಾರಿ ಶಾಸಕರಾಗಿದ್ದ ಅವರು1994 ರಲ್ಲಿ ದೇವೇಗೌಡರ ಸಂಪುಟದಲ್ಲಿ ಸಚಿವರಾಗಿದ್ದು ಕಳೆದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ತೋಟಗಾರಿಕಾ ಸಚಿವರಾಗಿದ್ದರು.
ಪತ್ನಿ ಸಿದ್ದಮ್ಮಗೌಡ್ತಿ ಬಿರಾದಾರ್, 4 ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣುಮಗಳನ್ನ ಮನಗೂಳಿ ಅಗಲಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

