;

ಗ್ರಾಮೀಣ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಕಾರ್ಯ ನಿರ್ವಹಿಸಬೇಕು.!!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ತಾಲೂಕಿನ ಚಿಕ್ಕೋಬಹಳ್ಳಿ ಗ್ರಾಮದ ಶಾಲೆಯಲ್ಲಿ ಆಯೋಜಿಸಿದ್ದ 200-21ನೇ ಸಾಲಿನ ಶಾಲಾಭಿವೃದ್ಧಿ ಸಮಿತಿ ಸಭೆಯಲ್ಲಿ ಸದಸ್ಯರು ಓ.ಕರಿಸಬಪ್ಪ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಶಾಲಾಭಿವೃದ್ಧಿ ಸಮಿತಿಗಳು ಕಾರ್ಯನಿರ್ವಹಿಸಬೇಕು ತಾಲೂಕಿನ ಚಿಕ್ಕೋಬಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ 2020-21 ನೇ ಸಾಲಿನ ಶಾಲಾಭಿವೃದ್ಧಿ ಸಮಿತಿ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಹೆಣ್ಣು ಗಂಡೆಂಬ ಭೇದ ಇಲ್ಲದೆ ಎಲ್ಲ ಮಕ್ಕಳಿಗೂ ಸಮಶಿಕ್ಷಣ ಕೊಡಿಸುವಲ್ಲಿ ಶಾಲಾಭಿವೃದ್ಧಿ ಸಮಿತಿಗಳು ಪೂರಕವಾಗಿ ಕೆಲಸ ನಿರ್ವಹಿಸಬೇಕು. ಮಕ್ಕಳಿಗೆ ಶಿಕ್ಷಣ ಕಡ್ಡಾಯವಾಗಿದ್ದು, ಎಲ್ಲ ಮಕ್ಕಳಿಗೂ ಶಿಕ್ಷಣ ನೀಡಿ ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು. ಮಗುವು ಶಾಲೆಗೆ ಬಂದಿಲ್ಲ ಎಂದರೆ ಕೇವಲ ಶಿಕ್ಷಕರನ್ನೇ ಹೊಣೆಯಾಗಿಸದೆ ಶಾಲಾಭಿವೃದ್ಧಿ ಸಮಿತಿ ಜವಾಬ್ದಾರಿ ವಹಿಸಿಕೊಂಡು ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಶ್ರೇಯೋಭಿವೃದ್ಧಿಗೆ ಸಮುದಾಯ ಮತ್ತು ಪೋಷಕರ ಸಹಕಾರ ಮುಖ್ಯ. ಶಾಲೆ ಅಭಿವೃದ್ಧಿಯಾಗುವಜತೆಗೆ ಎಲ್ಲ ಮಕ್ಕಳಿಗೆ ಶಿಕ್ಷಣ ದೊರೆಯಬೇಕು. ಹಾಗಾಗಿ, ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಶಾಲೆಗೆ ಕರೆತಂದು ವಿದ್ಯಾವಂತರನ್ನಾಗಿಸಬೇಕು. ಶಾಲೆಯ ಸಮಸ್ಯೆಗಳನ್ನು ಅರಿತು ಅವುಗಳನ್ನು ಪರಿಹರಿಸುವತ್ತ ಶಾಲಾಭಿವೃದ್ಧಿ ಸಮಿತಿ ಮುಂದಾಗಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖ್ಯೋಪದ್ಯಾಯ ಶಿವಕುಮಾರ್,ಗ್ರಾಮ ಪಂಚಾಯಿತಿ ಸದಸ್ಯೆ ಭಾಗ್ಯಮ್ಮ, ವಡ್ಡರಪೆಂಟೆ ಶಾಲೆ ಅಧ್ಯಕ್ಷ ಕೊಲ್ಲಪ್ಪ ರೆಡ್ಡಿ, ಮುಖ್ಯಶಿಕ್ಷಕಿ ಲೀಲಾವತಿ, ಹೇಮಾವತಿ, ಪರಮೇಶ್ವರಪ್ಪ, ರವಿ ಕುಮಾರ್, ಸಂಪನ್ಮೂಲ ವ್ಯಕ್ತಿ ಗೌಡಪ್ಪ, ಮಂಜುನಾಥ, ಬಸವೇಶ್ವರ ಮತ್ತಿತರರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;