ವರದಿ. ವಿರೇಶ್ ಎಚ್ಚರಿಕೆ ಪತ್ರಿಕಾ ವರದಿಗಾರ

ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಪೂಜಾರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೆಹಳ್ಳಿಯಲ್ಲಿ ಗ್ರಾಮದಲ್ಲಿ ದಿನಾಂಕ 5-2 -2021 ನೇ ಶುಕ್ರವಾರದಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ವತಿಯಿಂದ ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಗ್ರಾಮಸಭೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಿಪ್ಪೇಹಳ್ಳೀ ನಲ್ಲಿ ನಡೆಯಿತು. ಶಾಲಾ ಮಕ್ಕಳು ಪ್ರಾರ್ಥನೆ ಮತ್ತು ರೈತ ಗೀತೆಯನ್ನು ಹಾಡಿದರು. ನಿಜಲಿಂಗಪ್ಪ ಮಾತನಾಡಿ ಗ್ರಂಥಾಲಯದ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಲು ಮಕ್ಕಳಿಗೆ ತಿಳಿಸಿದರು. ಈಶಣ್ಣ ಇವರು ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಗ್ರಾಮಸಭೆಯ ಉದ್ದೇಶಗಳು ಮತ್ತು ಆಶಯಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ, ಜಿ ಶಿಲ್ಪ ಬಸಪ್ಪ ಹಾಗೂ ಸದಸ್ಯರಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು . ಗ್ರಂಥಾಲಯ ಮೇಲ್ವಿಚಾರಕರು ಲಲಿತಮ್ಮ ಮತ್ತು ಕಂಪ್ಯೂಟರ್ ಆಪರೇಟರ್ ಈಶಣ್ಣ ಗ್ರಾಮಪಂಚಾಯಿತಿ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಶಾಲೆಯ ವಿದ್ಯಾರ್ಥಿಗಳು ,ಊರಿನ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. J ಪಾಲಯ್ಯ ಸ್ವಾಗತ ಮತ್ತು ವಂದನಾರ್ಪಣೆ ಮಾಡಿದರು. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
