ಮೊಳಕಾಲ್ಮುರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಕಾಯ್ದೆನ್ನು ವಿರೋಧಿಸಿ ಹೆದ್ದಾರಿ ತಡೆದು ಪ್ರತಿಭಟನೆ.!!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಕಾಯ್ದೆಗಳನ್ನು ವಿರೋಧಿಸಿ ಹೆದ್ದಾರಿ ತಡೆದು ಪ್ರತಿಭಟನೆ- ರಾಷ್ಟ್ರಪತಿಯವರಿಗೆ ಪತ್ರ ಬರೆದ ರೈತ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಶನಿವಾರ ಬೀದರ್ -ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ನಡೆಸಿ ಆಕ್ರೋಶ ಹೊರಹಾಕಿದರು.

ಮಧ್ಯಾಹ್ನ 12ಗಂಟೆ ಸುಮಾರಿಗೆ ಹಾನಗಲ್ ಸಮೀಪದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಭಾರತ ಕಮ್ಯುನಿಸ್ಟ್ ಪಕ್ಷ, ದಲಿತ ಸಂಘರ್ಷ ಸಮಿತಿ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಗಿಳಿದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ರೈತ ಪರವಾದ ಕೃಷಿ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಕಾರ್ಪೋರೇಟ್ ಕಂಪನಿಗಳ ಪರವಾಗಿ ವರ್ತಿಸುತ್ತಿದೆ. ಪ್ರತಿಭಟನಾನಿರತ ರೈತರನ್ನು ದೆಹಲಿ ಪ್ರವೇಶಿದಂತೆ ರಸ್ತೆಗೆ ಮಳೆ ಹೊಡೆ ಯುವುದು ಸೇರಿ ನಾನಾ ರೀತಿಯಲ್ಲಿ‌ ತೊಂದರೆ ಕೊಟ್ಟು ಪ್ರತಿಭಟನೆಯನ್ನು ಹತ್ತಿಕ್ಕುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಪ್ರಧಾನಿ ಮೋದಿ ಅವರು ಮೊಂಡುತನ ಪ್ರದರ್ಶಿಸದೆ ಕೃಷಿ ಕಾಯ್ದೆಗಳ ತಿದ್ದುಪಡಿ ರದುಗೊಳಿಸಬೇಕು. ರೈತರು ಹಾಗೂ ಕಾರ್ಮಿಕರಿಗೆ ಹೊಸ ಸಾಲ ನೀಡಿ ನೆರವಾಗಬೇಕು ಹಾಗೂ ರಾಜ್ಯದ ಕಾರ್ಮಿಕರಿಗೆ ಇರುವ ಕಾನೂನುಗಳನ್ನು ಸರಳಗೊಳಿಸುವ ಜತೆಗೆ ಇನ್ನಷ್ಟು ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು. ರೈತ ಸಂಘದ ರಾಜ್ಯ ಮುಖಂಡ ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ, ಬೆಳಗಲ್ ಈಶ್ವರಯ್ಯಸ್ವಾಮಿ, ರಾಜಣ್ಣ ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್, ದಸಂಸ ಸಂಚಾಲಕ ಕೊಂಡಾಪುರ ಪರಮೇಶ, ಕೋನಸಾಗರ ಮಂಜಣ್ಣ, ಮರಹಳ್ಳಿ ರವಿ ಕುಮಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend