31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ವಿಜಯನಗರವನ್ನು ಘೋಷಣೆ…!!!

ವರದಿ. ಮಂಜುನಾಥ್ ದೊಡ್ಡಮನಿ

ಬೆಂಗಳೂರು : ರಾಜ್ಯದ 31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ವಿಜಯನಗರವನ್ನು ಘೋಷಣೆ ಮಾಡಿ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆಯಾಗಿದೆ.

ಈ ಕುರಿತಂತೆ ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ ಅಧೀನ ಕಾರ್ಯದರ್ಶಿ ವಿಟಿ ರಾಜಶ್ರೀ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ( 1964ರ ಕರ್ನಾಟಕ ಅಧಿನಿಯಮ ಸಂಖ್ಯೆ 12)ರ 6ನೇ ಪ್ರಕರಣದ ಮೇರೆಗೆ ಅಗತ್ಯ ಪಡಿಸಲಾದಂತೆ ಬಳ್ಳಾರಿಯ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ, ವಿಜಯ ನಗರ ಜಿಲ್ಲೆ ಎಂಬ ಹೆಸರಿನ ನೂತನ ಜಿಲ್ಲೆಯನ್ನು ರಚಿಸಲಾಗಿದೆ.

ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನವನ್ನಾಗಿ ಹೊಸಪೇಟೆಯನ್ನು ಮಾಡಲಾಗಿದ್ದು, ಇಂತಹ ನೂತನ ಜಿಲ್ಲೆಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend