ಯಾದಗಿರಿ:ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ವೀಕ್ಷಣೆ…!!!

ವರದಿ.ಮುಕ್ಕಣ್ಣ ಹುಲಿಗುಡ್ಡ

ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ವೀಕ್ಷಣೆ

ಯಾದಗಿರಿ.ಫೆ.11 ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಗುರುವಾರದಂದು ನಗರದ ವಿವಿಧೆಡೆ ತೆರಳಿ, ಅಭಿವೃದ್ಧಿ ಕಾಮಗಾರಿಗಳ ವೀಕ್ಷಿಸಿದರು.
ಹಳೆ ಬಸ್ ನಿಲ್ದಾಣ ಹತ್ತಿರ ನಿರ್ಮಾಣವಾಗುತ್ತಿರುವ ಮೀನು ಮಾರುಕಟ್ಟೆ ಹಾಗೂ ವಾಲ್ಮೀಕಿ ಭವನದ ಹತ್ತಿರ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಮತ್ತು ಕನಕದಾಸರ ವೃತ್ತದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಉದ್ಯಾನವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ನಗರದಲ್ಲಿ ನಿರ್ಮಾಣವಾಗುತ್ತಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದ ಕಾಮಗಾರಿಗಳನ್ನಾಗಿ ನಿಗದಿತ ಸಮಯದಲ್ಲಿ ಅಚ್ಚುಕಟ್ಟಾಗಿ ಕಾಮಗಾರಿಗಳನ್ನು ಮುಗಿಸುವಂತೆ ಸಂಬAಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನಕದಾಸರ ವೃತ್ತದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನವನ್ನು ಆದಷ್ಟು ಬೇಗ ಮುಗಿಸಿ ಸಾರ್ವಜನಿಕರಿಗೆ ವಾಯುವಿವಾರಕ್ಕೆ ಅನುವು ಮಾಡಿಕೊಂಡಬೇಕೆAದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದೇವಿಂದ್ರಪ್ಪ ಚೌವ್ಹಾಣ, ಜಿಲ್ಲಾ ನಿರ್ಮಿತಿ ಕೇಂದ್ರದ ಅಧಿಕಾರಿಯಾದ ಕಿರಣ ಕುಮಾರ್ ಸೇರಿದಂತೆ ಇತರರು ಸ್ಥಳದಲ್ಲಿ ಇದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend