ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

*ದಿನಾಂಕ.13.2.2021. ಬಳ್ಳಾರಿ ಜಿಲ್ಲಾ ಕೂಡ್ಲಿಗಿ ತಾಲೂಕು*
*ತಾಲೂಕಿನ ಹಿರೇಕುಂಬಳಗುಂಟೆ ಗ್ರಾಮ ಪಂಚಾಯಿತಿ ಗ್ರಂಥಾಲಯದ ವತಿಯಿಂದ ದಿನಾಂಕ 12. 2. 2021 .ರಂದು ಓದುವ ಬೆಳಕು ಮತ್ತು ಮಕ್ಕಳ ಸ್ನೇಹಿ ಗ್ರಾಮಸಭೆ* *ಕಾರ್ಯಕ್ರಮವನ್ನು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದಾಸ ರೋಬನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.* ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ತೆರೆದ ಮನೆ ಪರಿಚಯ ಸಪ್ತಹ ನಡೆಸಲಾಯಿತು. ದಾಸರೋಬನಹಳ್ಳಿ ಸರ್ಕಾರಿ ಶಾಲೆಯ ಮುಖ್ಯಗುರುಗಳಾದ ಶಿವ ಮೂರ್ತಿ ಯವರು ಮಕ್ಕಳ ಸ್ನೇಹಿ ಗ್ರಾಮ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ನೂತನ ಸದಸ್ಯರಾದ ಬಸವರಾಜ ರವರು ಶಾಲಾ ಮಕ್ಕಳಿಗೆ ಗ್ರಂಥಾಲಯದ ಪುಸ್ತಕಗಳ ಬಗ್ಗೆ ಕಥೆ ಕಾದಂಬರಿಗಳ ಬಗ್ಗೆ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾತನಾಡಿದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಾದ ಕೊಟ್ರೇಶ್ ರವರು ಮಕ್ಕಳಿಗೆ ಪುಸ್ತಕಗಳನ್ನು ನೀಡಿ ಪುಸ್ತಕಗಳನ್ನು ಯಾವ ರೀತಿ ಓದಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಎಸ್. ಡಿ. ಎಂ.ಸಿ ಅಧ್ಯಕ್ಷ ರಾದ ಎಂ ಮೂರ್ತಿ ಅವರು ಭಾಗವಹಿಸಿದ್ದರು ಇವರು ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಿದರು. ಗ್ರಾಮ ಪಂಚಾಯಿತಿ ಗ್ರಂಥಾಲಯದ ಮೇಲ್ವಿಚಾರಕರಾದ ಡಿ . ವೃಷಭೇಂದ್ರಪ್ಪ ನವರು ಮಕ್ಕಳಿಗೆ ಗ್ರಂಥಾಲಯದ ಬಗ್ಗೆ ಕೆಲವು ವಿಚಾರಗಳನ್ನು ತಿಳಿಸಿದರು ಶಿಕ್ಷಕರಾದ ಶಿವಮೂರ್ತಪ್ಪ ನವರು ವಂದನಾರ್ಪಣೆ ಕಾರ್ಯಕ್ರಮವನ್ನು ಮಾಡಿದರು ಈ ಕಾರ್ಯಕ್ರಮದಲ್ಲಿ ಹಿರೇಕುಂಬಳಗುಂಟೆ ಗ್ರಾಮಪಂಚಾಯತಿಯ ಸಿಬ್ಬಂದಿ ದಾಸರಓಬನಹಳ್ಳಿಯ ಶಾಲಾ ಶಿಕ್ಷಕರು ಶಾಲಾ ಮಕ್ಕಳು ಗ್ರಾಮ ಪಂಚಾಯತಿ ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
