ವರದಿ. ನಳಿನಿ ಬೆಂಗಳೂರು

ಬೆಂಗಳೂರು: ಪ್ರೇಮಿಗಳ ದಿನದಂದೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಗಳು ಹಾಗೂ ಕೆಫೆ ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಪುತ್ರ ಅಮಾರ್ಥ್ಯ ವಿವಾಹ ನೆರವೇರಿದೆ. ನವ ವಧು ವರರಿಗೆ ಗಣ್ಯಾತೀಗಣ್ಯರು ಶುಭ ಹಾರೈಸಿದ್ದಾರೆ.
ಡಿಕೆಶಿ ಮಗಳ ಮದುವೆಗೆ ಸಿಎಂ ಯಡಿಯೂರಪ್ಪ ಇಂದು ಬೆಳಗ್ಗೆಯೇ ಆಗಮಿಸಿ ವಧು ವರರಿಗೆ ಆಶೀರ್ವದಿಸಿದ್ದಾರೆ. ಅಷ್ಟೇ ಅಲ್ಲ ಮಾಜಿ ಸಿಎಂ ಕುಮಾರಸ್ವಾಮಿ ದಂಪತಿ ಕೂಡ ವಧು ವರರಿಗೆ ಶುಭ ಹಾರೈಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಮದುವೆಗೆ ಆಗಮಿಸಿದ್ದರು.
ಸಚಿವ ವಿ.ಸೋಮಣ್ಣ, ಮಾಜಿ ಸಚಿವ ಚೆಲುವನಾರಾಯಣ ಸ್ವಾಮಿ, ನಟ ಪುನೀತ್ ರಾಜ್‍ಕುಮಾರ್ ದಂಪತಿ, ಕಾಂಗ್ರೆಸ್ ಮುಖಂಡರಾದ ಜಿ. ಪರಮೇಶ್ವರ್, ದಿಗ್ವಿಜಯ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಮುಂತಾದ ಗಣ್ಯರು ಮದುವೆ ಸಮಾರಂಭದಲ್ಲಿ ಹಾಜರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
