ಸಂತ ಸೇವಾಲಾಲ್ ಜಯಂತಿಯಲ್ಲಿ ಜಿ.ಪಂ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಲಹೆ..

ವರದಿ. ಶಶಿಕುಮಾರ್ ಚಳ್ಳಕೆರೆ

ಸಂತ ಸೇವಾಲಾಲ್ ಜಯಂತಿಯಲ್ಲಿ ಜಿ.ಪಂ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಲಹೆ

ಪ್ರತಿ ದಿನ ದಾರ್ಶನಿಕರ ತತ್ವಾದರ್ಶಗಳ ಸ್ಮರಿಸಿ

ಚಿತ್ರದುರ್ಗ, ಫೆಬ್ರುವರಿ15:
ಕೇವಲ ಜಯಂತಿ ದಿನ ಮಾತ್ರ ದಾರ್ಶನಿಕರನ್ನು ಸ್ಮರಿಸದೇ ಪ್ರತಿ ದಿನವೂ ದಾರ್ಶನಿಕರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸ್ಮರಿಸಬೇಕು. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸಂತ ಸೇವಾಲಾಲ್ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಸಂತ ಸೇವಾಲಾಲ್  ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು. ಈ ವರ್ಷ  ಕೋವಿಡ್-19ರ ಹಿನ್ನಲೆಯಲ್ಲಿ ಜಯಂತಿಯನ್ನು ಸರಳವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಮಾತನಾಡಿ, ಸಂತ ಸೇವಾಲಾಲ್ ಅವರ ಜಯಂತಿ ಕೇವಲ ಬಂಜಾರ ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಅವರ ತತ್ವಾದರ್ಶಗಳು ಒಂದು ಸಮುದಾಯಕ್ಕೆ, ಸಮಾಜಕ್ಕೆ ಮಾತ್ರ ಸೀಮಿತವಾಗಬಾರದು. ಸತ್ಯದ ನುಡಿ, ನಿಷ್ಠೆ ತೋರುವಿಕೆ, ಮದ್ಯ ಸೇವಿಸ ಬಾರದು ಎನ್ನುವ ಸಂತ ಸೇವಾಲಾಲ್ ಅವರ ತತ್ವಗಳು ಇಡೀ ಸಮಾಜಕ್ಕೆ ಪೂಕರವಾದ ವಿಚಾರಗಳಾಗಿವೆ ಎಂದು ಹೇಳಿದರು.
ಸಮಾಜದ ಒಗ್ಗಟ್ಟು ಮತ್ತು ಏಳಿಗೆಗಾಗಿ ಸಂತ ಸೇವಾಲಾಲ್ ಅವರು ಸಾಕಷ್ಟು ಶ್ರಮಿಸಿದ್ದಾರೆ ಎಂದರು.
ಪತ್ರಕರ್ತ ನರೇನಹಳ್ಳಿ ಅರುಣ್ ಕುಮಾರ್ ಮಾತನಾಡಿ, ಸೇವಾಲಾಲ್ ಅವರ ಸತ್ಯ, ಅಹಿಂಸೆ, ಸೌರ್ಹದತೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಹಿತಿ ಮಂಜುನಾಥ್ ನಾಯ್ಕ್, ಜಿಲ್ಲಾ ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ರಾಮನಾಯ್ಕ್, ಬಂಜಾರ ಸಮಾಜದ ಮುಖಂಡ ರಾಜ್‍ನಾಯ್ಕ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend