ವರದಿ. ಸುರೇಶ್ ಹೊಳಲ್ಕೆರೆ

ಹಗಲಿನಲ್ಲಿ 5 ಘಂಟೆ ವಿದ್ಯುತ್ ನೀಡುವಂತೆ ಬೆಸ್ಕಾಂ ಕಛೇರಿ ಮುಂದೆ ಧರಣಿ ನಡೆಸಿದ ರೈತರು..
ರಾತ್ರಿ ವೇಳೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿರುವುದರಿಂದ ರೈತರಿಗೆ ತೋಟ ಹಾಗೂ ಹೊಲಗಳಿಗೆ ಹೋಗುವುದಕ್ಕೆ ತೊಂದರೆಯಾಗುತ್ತಿದೆ. ಹಾಗೆ ದಿನದಲ್ಲಿ ಕೇವಲ ಒಂದೂವರೆ ಗಂಟೆ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರ ಬೆಳೆಗಳು ನಾಶವಾಗುತ್ತಿವೆ. ಹೀಗಾಗಿ ಹಗಲಿನಲ್ಲಿ ಕನಿಷ್ಠ 5 ಗಂಟೆ ವಿದ್ಯುತ್ ಸರಬರಾಜು ಮಾಡುವಂತೆ ರಾಜ್ಯ ರೈತ ಸಂಘಟನೆ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ ಆಗ್ರಹಿಸಿದರು. ಹೊಳಲ್ಕೆರೆ
ಪಟ್ಟಣದ ಬೆಸ್ಕಾಂ ಕಚೇರಿ ಎದುರು ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸಿದರು.
ಈ ವೇಳೆ ರೈತ ಸಂಘನೆ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ ಮಾತನಾಡಿ, ಹೊಳಲ್ಕೆರೆ ಬೆಸ್ಕಾಂ K P T C L ಗಳು ಅವಿವೇಕದ ಪರಮಾವಧಿಯನ್ನು ತಲುಪಿವೆ. ದಿನದಲ್ಲಿ ಒಂದೂವರೆ ತಾಸು ಪಂಪ್ಸೆಟ್ಗಳಿಗೆ ವಿದ್ಯುತ್ ಸರಬರಾಜು ಮಾಡುವ ಮೂಲಕ ರೈತರ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳನ್ನು ನಾಶಮಾಡುತ್ತಿವೆ. ಚಿರತೆ, ಹಂದಿ, ಕರಡಿ ಹಾವಳಿ ಇರುವುದರಿಂದ ಹಗಲಿನಲ್ಲಿ ಕನಿಷ್ಠ ೫ ತಾಸು ವಿದ್ಯುತ್ ಸರಬರಾಜು ಮಾಡಬೇಕು. ಇಲ್ಲದಿದ್ದರೆ ಅನಿರ್ಧಿಷ್ಠಾವಧಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರೈತ ಸಂಘಟನೆ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಜಿಲ್ಲಾಧ್ಯಕ್ಷ ಚಿಕ್ಕಬ್ಬಿಗೆರೆ ನಾಗರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಬಯಲಪ್ಪ, ಹೊಳಲ್ಕೆರೆ ತಾಲೂಕು ಅಧ್ಯಕ್ಷ ಅಪ್ಪರಸನಹಳ್ಳಿ ಎಂ.ಬಸವರಾಜಪ್ಪ, ಹೊಸದುರ್ಗ, ಚಳ್ಳಕೆರೆ, ಹಿರಿಯೂರು, ಚಿತ್ರದುರ್ಗ ರೈತ ಸಂಘಟನೆಯ ತಾಲೂಕು ಅಧ್ಯಕ್ಷರು, ತಾಲೂಕಿನ ವಿವಿಧ ಗ್ರಾಮಗಳ ರೈತ ಮುಖಂಡರು ಭಾಗಿಯಾಗಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
