ವರದಿ. ಶಶಿಕುಮಾರ್ ಚಳ್ಳಕೆರೆ

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಸೋಮವಾರ ‘ಉರುಳು ಸೇವೆ’ಯೊಂದಿಗೆ ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಪಂಗಡಕ್ಕೆ ಸೇರಲು ಎಲ್ಲ ಅರ್ಹತೆ ಇದ್ದರೂ ಸಮುದಾಯವನ್ನು ವಂಚಿಸಲಾಗುತ್ತಿದೆ. ಇನ್ನಾದರೂ ಎಸ್ಟಿ ಮೀಸಲಾತಿ ಸೌಲಭ್ಯ ದೊರಕಿಸಿಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ ಮೂಲಕ ಮನವಿ ರವಾನಿಸಿದರು.
ಹಳೆಯ ಧಿರಿಸು ತೊಟ್ಟು, ತಲೆಯ ಮೇಲೆ ಟವೆಲ್ ಸುತ್ತಿಕೊಂಡಿದ್ದ ಅನೇಕರು ಉರಿ ಬಿಸಿಲು, ಸುಡುವ ಕಾಂಕ್ರಿಟ್ ರಸ್ತೆಯನ್ನು ಲೆಕ್ಕಿಸದೆ ಉರುಳುಸೇವೆ ಮಾಡಿದರು. ಪ್ರವಾಸಿ ಮಂದಿರದಿಂದ ಆರಂಭವಾದ ಉರುಳುಸೇವೆ ಜಿಲ್ಲಾಧಿಕಾರಿ ಕಚೇರಿ ತಲುಪಿತು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
