;

ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ಜನರ ಮೇಲೆ ದೌರ್ಜನ್ಯ ನಡೆಸುವುದು ಶಿಕ್ಷಾರ್ಹ ಅಪರಾಧ.!!

ವರದಿ.ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು: ಶ್ರೀ ದುರ್ಗಾ ಪ್ರೌಢ ಶಾಲೆಯಲ್ಲಿಂದು ಅಸ್ಪೃಶ್ಯತೆ ನಿವಾರಣೆ ಕುರಿತು ವಿಚಾರಗೋಷ್ಠಿ ಮತ್ತು ಕಾರ್ಯಾಗಾರ. ಅಸ್ಪೃಶ್ಯತೆ ಆಚರಣೆ ಮತ್ತು ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ಜನರ ಮೇಲೆ ದೌರ್ಜನ್ಯ ನಡೆಸುವುದು ಶಿಕ್ಷಾರ್ಹ ಅಪರಾಧವಾಗಿದ್ದು ಅಂತಹ ಘಟನೆಗಳಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಜರಗಿಸಲಾಗುವುದು ಎಂದು ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಎಂ.ಕೆ.ಬಸವರಾಜ ಹೇಳಿದರು. ಪಟ್ಟಣದ ದುರ್ಗಾ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಸಮಾಜಕಲ್ಯಾಣ ಇಲಾಖೆ, ಅಕ್ಷರ ಗ್ರಾಮೀಣ ವಿಕಾಸ ಸಂಸ್ಥೆಯ
ಸಹಯೋಗದಲ್ಲಿ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ದೌರ್ಜನ್ಯ ತಡೆ ಕಾಯ್ದೆ ಹಾಗು ಅಸ್ಪೃಶ್ಯತೆ ನಿವಾರಣಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ.ಬಾಬಾ ಸಾಹೇಬರು ಬರೆದಂತ ಸಂವಿಧಾನದ ಆಶಯದಂತೆ ಎಲ್ಲರೂ ಒಟ್ಟಾಗಿ ಬಾಳಬೇಕು. ಮೇಲು ಕೀಳೆಂಬ ಭೇದ ತೊರೆದು ಸರ್ವರೂ ಸಮಾನರಾಗಿ ಬಾಳಬೇಕು. ಯಾರೂ ತಾರತಮ್ಯ ಮಾಡದೇ ಎಲ್ಲರೂ ಸಮಾನತೆ ಸೌಹಾರ್ದತೆಯಿಂದ ಬಾಳಬೇಕು. ಆಚರಣೆ ಮಾಡುವುದು ಅಸ್ಪೃಶ್ಯತೆ ಅಪರಾಧವಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯಗಳ ಮೇಲೆ ಜಾತಿ ನಿಂದನೆ ಮಾಡುವುದು. ದೈಹಿಕವಾಗಿ ಹಲ್ಲೆ ನಡೆಸುವುದು, ಆಸ್ತಿ ಹಾನಿ ಮಾಡುವುದು ಅಪರಾಧವಾಗಿದೆ. ಇಂತಹ ಘಟನೆಗಳಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರೇಮನಾಥ ಮಾತನಾಡಿ, ಸರ್ಕಾರ ಅಸ್ಪೃಶ್ಯತೆ ನಿವಾರಣೆಗೆ ಕಠಿಣ ಕಾನೂನುಗಳನ್ನು ರೂಪಿಸಿದೆ. ಸಮಾಜದಲ್ಲಿ ಎಲ್ಲರೂ ಸಮಾನರಾಗಿ ಬಾಳಬೇಕು. ದಲಿತರ ಹಾಗೂ ದುರ್ಬಲ ವರ್ಗಗಳ ಏಳಿಗೆಗಾಗಿ ಸಮಾಜ ಕಲ್ಯಾಣ ಇಲಾಖೆ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಪರಿಶಿಷ್ಟ ಜಾತಿ, ಪಂಗಡ ಸಮುದಾಯ ಗಳು ಸೌಲಭ್ಯಗಳನ್ನು ಸದ್ವಿನಿಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಪಪಂ ಸದಸ್ಯೆ ಶುಭ ಪೃಥ್ವಿರಾಜ್, ಕಸಾಪ ತಾಲೂಕು ಅಧ್ಯಕ್ಷ ಡಿ.ಒ. ಮುರಾರ್ಜಿ, ಮುಖ್ಯಾಧಿಕಾರಿ ಬಸಣ್ಣ ವಾರ್ಡನ್ ಹಾಲೇಶ, ಮುಖ್ಯಶಿಕ್ಷಕ ಎಂ.ಡಿ.ಲತೀಫ್ ಸಾಬ್, ಶಿಕ್ಷಕ ಓಬಣ್ಣ ಮತ್ತಿತರರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;