ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ಪಟ್ಟಣದ ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಉದ್ಯೋಗ ಮೇಳ ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ತಹಸೀಲ್ದಾರ್ ಮಾರುತಿ ಬಳಕೋಡ ಮಾತನಾಡಿ ಗ್ರಾಮೀಣ ಭಾಗದ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿಸಿಕೊಂಡು ನಿರುದ್ಯೋಗಿಯಾಗಿ ಮನೆಯಲ್ಲಿ ಕೂತಿದ್ದಾರೆ ಅವಕಾಶಗಳಿಗಾಗಿ ಪ್ರತಿನಿತ್ಯ ಬೆಂಗಳೂರಿನಂತಹ ಮಹಾನಗರಗಳಲ್ಲಿ ನಿತ್ಯವೂ ಉದ್ಯೋಗಕ್ಕಾಗಿ ಅಲೆದು ನಿರಾಶಾವಾದಿಗಳಾಗಿದ್ದರೆ ಆದರೆ ಇಂತಹ ಸಂದರ್ಭದಲ್ಲಿ ಪಟ್ಟಣದಲ್ಲಿ 15ಕ್ಕಿಂತ ಹೆಚ್ಚು ಕಂಪನಿಗಳು ಉದ್ಯೋಗ ನೀಡಲು ಮುಂದಾಗಿರುವುದು ಯುವಕರ ಭವಿಷ್ಯಕ್ಕೆ ಭದ್ರ ಬುನಾದಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಡಿ ಸೂರಯ್ಯ ಜಿಲ್ಲಾ ಉದ್ಯೋಗ ವಿನಿಮಯಧಿಕಾರಿಗಳಾದ ಕಿಶೋರ್ ಕುಮಾರ್…ಉದ್ಯೋಗ ಮಾರ್ಗದರ್ಶನ ಘಟಕ ಸಂಚಾಲಕರಾದ ಯೋಗಾನಂದ ಐ.ಕ್ಯೂ.ಎ.ಸಿ.ಸಂಚಾಲಕರಾದ ತಿಮ್ಮಣ್ಣ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
