ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮೂರು ಇಂದು ಮಾರ್ಚ್-6-2021ಇಂದು ವಿಧಾನ ಸಭಾ ಕ್ಷೇತ್ರದ ಮೊಳಕಾಲ್ಮೂರು ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಪಿ.ಟಿ ಹಟ್ಟಿಯಿಂದ ಬಸ್ ನಿಲ್ದಾಣದವರೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ಗಳ ಬೆಲೆ ಏರಿಕೆ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ರೈತರ ಕೃಷಿ ಕಾಯ್ದೆಗಳ, ವಿರುದ್ಧವಾಗಿ ಪಾದಯಾತ್ರೆ ಮೂಲಕ ಪ್ರತಿಭಟನೆಯನ್ನು ನಡೆಸಿದರು, ಹಾಗೆಯೇ ಮೊಳಕಾಲ್ಮೂರು ತಾಲ್ಲೂಕು ತಹಶಿಲ್ದಾರರಿಗೆ ಮನವಿಯನ್ನು ಸಲ್ಲಿಸಿ, ಮಾತನಾಡುತ್ತಾ ಪ್ರತಿ ವಿಧಾನ ಸಭ ಕ್ಷೇತ್ರದವ್ಯಾಪ್ತಿಯಲ್ಲಿ ನಡೆಯತ್ತಿರುವ ಪ್ರತಿಭಟನೆ ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿ ಗಳಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತದೆ, ಸಾರ್ವಜನಿಕರಿಗೆ ತೊಂದರೆ ಯಾಗದಂತೆ ನಮ್ಮ ಪಕ್ಷದ ರಾಜ್ಯಧ್ಯಕ್ಷರ ಮಾರ್ಗದರ್ಶನಲ್ಲಿ ಕಾಂಗ್ರೆಸ್ ಪಕ್ ಪ್ರತಿಭಟನೆಗಳನ್ನು ನಡೆಸುತ್ತದೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ದಿನನಿತ್ಯ ಹೆಚ್ಚುತ್ತಿದೆ, ಅಗತ್ಯ ವಸ್ತುಗಳ ಬೆಲೆ ದಿನನಿತ್ಯ ಹೆಚ್ಚಾಗುತ್ತಿದೆ, ಅಚ್ಚೇದಿನ್ ಅಚ್ಚೇದಿನ್ ಅಂತ ಈ ರೀತಿ ದಿನನಿತ್ಯ ಬೆಲೆ ಹೆಚ್ಚಾಗುವುದು ಅಚ್ಚೇ ದಿನವೇ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು,
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ನೇರಲಗುಂಟೆ ತಿಪ್ಪೇಸ್ವಾಮಿ, ಮೊಳಕಾಲ್ಮೂರ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟೇಲ್ ಜಿ ಪಾಪನಾಯಕ ತಳಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ರೆಡ್ಡಿ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ತಾಜ್ ಪೀರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎನ್.ಕೆ.ದಾದಪೀರ್, ಯುವ ಕಾಂಗ್ರೆಸ್ ಕಾರ್ಯಧ್ಯಕ್ಷರಾ ಜಿ.ಎನ್.ಜಗದೀಶ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು, ಮೊಳಕಾಲ್ಮೂರು ತಾಲ್ಲೂಕು ಪಂಚಾಯತಿ ಅಧ್ಯಕ್ಷರಾದ ಬೋರಮ್ಮ ಪಾಲನಾಯಕ, ಮೊಳಕಾಲ್ಮೂರು ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಕ್ಷದ ಸದಸ್ಯರು, ಚಿತ್ರದುರ್ಗ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಮೊಗಲಳ್ಳಿ ಜಯಣ್ಣ, ಕಾಂಗ್ರೆಸ ಮುಖಂಡರಾದ ಅಶೋಕ ಲಾಯರ್, ಬಿ.ಟಿ.ಜಗದೀಶ್, ಕಿಸಾನ್ ಜಿಲ್ಲಾ ಅಧ್ಯಕ್ಷರಾದ ನಾಗರಾಜ್, ಸಂಪತ್ ಕುಮಾರ್, ಎನ್.ಡಿ.ಕುಮಾರ್, ಅಂಜಿನಪ್ಪ, ಅಶೋಕ ನಾಯ್ಡು, ಯುವ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
