ವರದಿ. ಶಶಿಕುಮಾರ್ ಚಳ್ಳಕೆರೆ

ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆ.
ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ನೇತೃತ್ವದ ಸರ್ಕಾರಗಳು ಜನವಿರೋಧಿ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಹಾಗೂ ಮೂರು ಕರಾಳ ಕೃಷಿ ಕಾನೂನುಗಳನ್ನು ಖಂಡಿಸಿ, ಚಳ್ಳಕೆರೆ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ.
ಚಳ್ಳಕೆರೆ ಶ್ರೀ ಜಗಳೂರುಅಜ್ಜ ಮಹಾಸ್ವಾಮಿ ದೇವಸ್ಥಾನದಿಂದ ತಹಶೀಲ್ದಾರ್ ಕಛೇರಿ ವರೆಗೆ ಪಾದಯಾತ್ರೆ ಪ್ರತಿಭಟನೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಎಲ್ಲರೂ ಸೇರಿ ರೈತರು ಹಾಗೂ ಕಾರ್ಮಿಕರ ಬೆನ್ನಿಗೆ ನಿಂತು ಬೆಂಬಲ ಸೂಚಿಸುವ ಸಲುವಾಗಿ ಹಾಗೂ ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ನೇತೃತ್ವದ ಸರ್ಕಾರಗಳು ಜನವಿರೋಧಿ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಹಾಗೂ ಮೂರು ಕರಾಳ ಕೃಷಿ ಕಾನೂನುಗಳನ್ನು ವಿರೋಧಿಸಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ರವರ ನೇತೃತ್ವದಲ್ಲಿ ಚಳ್ಳಕೆರೆ ಹಾಗೂ ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ಜಗಳೂರು ಅಜ್ಜಯ್ಯ ಮಹಾಸ್ವಾಮಿ
ದೇವಸ್ಥಾನದಿಂದ ತಹಶೀಲ್ದಾರ್ ಕಛೇರಿ ವರೆಗೆ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿ, ತಾಶೀಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಬಿ ಎಂ ಚಂದ್ರಪ್ಪನವರು ಜಿ ಪಂ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು ಸದಸ್ಯರಾದ ಬಿ.ಪಿ.ಪ್ರಕಾಶ್ ಮೂರ್ತಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೆ ತಾಜ್ ಪೀರ್ ಪ್ರಚಾರ ಸಮಿತಿ ಅಧ್ಯಕ್ಷರಾದ ಜಿ.ಎಸ್ ಮಂಜುನಾಥ್ ಕಾರ್ಯಾಧ್ಯಕ್ಷರಾದ ಹಾಲೇಶ್ ತಾ ಪಂ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಮಾಜಿ ಅಧ್ಯಕ್ಷರಾದ ವೀರೇಶ್ ನಗರಸಭೆ ಅಧ್ಯಕ್ಷರಾದ ಸಿ.ಬಿ.ಜಯಲಕ್ಷ್ಮಿ ಕ್ರಿಷ್ಣಮೂರ್ತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ್ ಗೌಡ ಮಾಜಿ ಅಧ್ಯಕ್ಷರಾದ ಲಕ್ಷ್ಮೀದೇವಿ , ನಿಂಗಮ್ಮ ಸದಸ್ಯರಾದ ಕೆ. ವೀರಭದ್ರಪ್ಪ ವೈ.ಪ್ರಕಾಶ್ ಮಲ್ಲಿಕಾರ್ಜುನ ಚಳ್ಳಕೇರಪ್ಪ ಮಂಜುಳ ಪ್ರಸನ್ನಕುಮಾರ್ ಸುಮ ಭರಮಯ್ಯ. ಸುಜಾತ ಪ್ರಹ್ಲಾದ್ ಕವಿತ ಬೋರಯ್ಯ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಹಾಜರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
