ವರದಿ. ವಿರೇಶ್ ಎಚ್ಚರಿಕೆ ಪತ್ರಿಕೆ ವರದಿಗಾರ

ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸುತ್ತಲೂ ಕಾಂಪೌಂಡ್ ಹಾಗೂ ಆಸ್ಪತ್ರೆಯ ಹಿಂಭಾಗದ ಹಳ್ಳದ ಕಡೆಗೆ ಚರಂಡಿ ನಿರ್ಮಾಣ ಕಾಮಗಾರಿಗೆ ಡಿಎಂಎಫ್ ಯೋಜನೆಯಡಿಯಲ್ಲಿ ರೂ ₹75 ಲಕ್ಷದ ಕಾಮಗಾರಿಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ “ಶ್ರೀ ಎನ್ ವೈ ಗೋಪಾಲಕೃಷ್ಣರವರು” ಭೂಮಿ ಪೂಜೆ ನೆರವೇರಿಸಿದೆ.ನಂತರ ,ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿದೆ. ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಾಗರತ್ನಮ್ಮ ,ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹಾದೇವಿ ,ಕೆ.ಎಂ .ತಿಪ್ಪೇಸ್ವಾಮಿ ,ಗುಂಡುಮುಣುಗು ತಿಪ್ಪೇಸ್ವಾಮಿ ಹಾಗೂ ತಾಲೋಕು ಪಂಚಾಯ್ತಿ ಸದಸ್ಯರಾದ ಪಾಪನಾಯ್ಕ್ ಮತ್ತು ,ಜಿಲ್ಲಾಪಂಚಾಯಿತಿ ಸದಸ್ಯರಾದ ಹೆಚ್ ರೇವಣ್ಣ ,ಮಾಜಿ ಜಿಲ್ಲಾಪಂಚಾಯಿತಿ ಸದಸ್ಯರಾದ ಕೆ,ಎಂ ,ಶಶಿಧರ,
ಇಒ ಬಸಣ್ಣ ,ಜಯರಾಜ್ ಕಾನಾಮಡುಗು,ಮಾಜಿ ಬಿಜೆಪಿ ಮಂಡಲ ಅಧ್ಯಕ್ಷರಾದ ವೀರನಗೌಡರು, ಬಿಜೆಪಿ ಮಂಡಲ ಅಧ್ಯಕ್ಷರಾದ ಕೆ ಚನ್ನಪ್ಪ ,ಅರೋಗ್ಯಧಿಕಾರಿ ಡಾ.ಪ್ರಸನ್ನಕುಮಾರ್ ,ಹಾಗೂ ಅರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು, ,ನೂತನ ಗ್ರಾಮ ಪಂಚಾಯತಿ ಸದಸ್ಯರು , ಗ್ರಾಮಸ್ದರು.ಸಾರ್ವಜನಿಕರು ಉಪಸ್ಥಿತರಿದ್ದರು..
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
