;

ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರೆ ನಿಷೇಧ…!!!

ವರದಿ. ಶಶಿಕುಮಾರ್ ಚಳ್ಳಕೆರೆ

ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರೆ ನಿಷೇಧ
*****
ಚಿತ್ರದುರ್ಗ,ಮಾರ್ಚ್26:
ಕೋವಿಡ್-19 ವೈರಾಣು ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವವನ್ನು ಜಿಲ್ಲಾಡಳಿತ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಾತ್ರಾ ಮಾಹೋತ್ಸವ ನಿಷೇಧಿಸಿದ್ದು, ಮಾರ್ಚ್ 29ರಂದು ನಡೆಯುವ ದೊಡ್ಡ ರಥೋತ್ಸವಕ್ಕೆ ಸಾರ್ವಜನಿಕರು ಮತ್ತು ಭಕ್ತಾಧಿಗಳು ನಾಯಕನಹಟ್ಟಿಗೆ ಬಾರದೇ, ತಮ್ಮ ತಮ್ಮ ಮನೆಗಳಲ್ಲಿಯೇ ಪೂಜೆ ಮಾಡಿ, ದೇವರಿಗೆ ಭಕ್ತಿಯನ್ನು ಅರ್ಪಿಸಬೇಕು ಜಿಲ್ಲಾಡಳಿತ ಮನವಿ ಮಾಡಿದೆ.
ಜಾತ್ರೆಯನ್ನು ಸಾಂಕೇತಿಕವಾಗಿ ಸರಳವಾಗಿ ಆಚರಿಸಲಾಗುತ್ತಿದ್ದು, ನಾಯಕನಹಟ್ಟಿ ಜನರು ಕಡ್ಡಾಯವಾಗಿ ಕೋವಿಡ್ ನಿಯಾವಳಿ ಅನ್ವಯ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ನಾಯಕನಹಟ್ಟಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಪ್ರಯತ್ನಿಸುವವರನ್ನು ಪೊಲೀಸ್ ಮತ್ತು ಆರ್‍ಟಿಓ ಸಿಬ್ಬಂದಿ ತಡೆಯುದಲ್ಲದೇ, ನಾಯಕನಹಟ್ಟಿ ಪ್ರವೇಶಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಜಾತ್ರೆ ಸರಳವಾಗಿ ಆಚರಣೆ ಮಾಡಲು ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;