ವರದಿ.ಎಂ. ಎಲ್. ವೆಂಕಟೇಶ್

ಪೊಲೀಸ್ ಧ್ವಜ ದಿನಾಚರಣೆ ಏ.2ರಂದು
ಬಳ್ಳಾರಿ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ದ್ವಜಾ ದಿನಾಚರಣೆ ಕಾರ್ಯಕ್ರಮವು ಏ.2ರಂದು ಬೆಳಗ್ಗೆ 8ಕ್ಕೆ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯುತು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿವೃತ್ತ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ನಾಗರಾಜ್.ಹೆಚ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಎಂ.ನಂಜುಂಡಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
