ವರದಿ. ದುಗ್ಗಪ್ಪ

ಸಿಂಧನೂರು: ತಾಲೂಕಿನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದರಿಂದ, ಇಂದಿನಿಂದ ಮೇ 4 ರವರೆಗೆ ಕೋವಿಡ್ ನಿಯಂತ್ರಣಕ್ಕಾಗಿ ತಾಲೂಕು ಮಟ್ಟದ ಅಧಿಕಾರಿಗಳು ಬುಧವಾರ ರಂದು ನಗರ ಪೋಲಿಸ್ ಹಾಗೂ ನಗರ ಸಭೆ ಕಾರ್ಯಾಲಯದಲ್ಲಿ ಸಭೆಯನ್ನು ನಡೆಸಿ ಜಿಲ್ಲಾಧಿಕಾರಿ ಆದೇಶ ಅನ್ವಯ ,ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯಿಂದ ನೈಟ್ ಕರ್ಫ್ಯೂ ಜೊತೆಗೆ ,ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ರ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿದ್ದರು ಮಧ್ಯಾಹ್ನ 2 ಗಂಟೆಯ ನಂತರ ಅಗತ್ಯ ಸೇವೆಗಳನ್ನು ಬಿಟ್ಟು ಉಳಿದೆಲ್ಲವೂ ಸಂಪೂರ್ಣ ಬಂದ್ ಮಾಡಲಾಯಿತು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
