;

ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ (65) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ…!!!

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಹಾಗೂ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ (65) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಈ ಹಿನ್ನೆಲೆ ಸಿಎಂ ಯಡಿಯೂರಪ್ಪ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ‘ ಮಹದೇವ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಯಿತು, ಅವರು ನನ್ನ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ’ ಎಂದು ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿನಿಂದಾಗಿ, ನಾರಾಯಣ ಹೃದಯಾಲಯಕ್ಕೆ ದಾಖಲಾಗಿ, ಚಿಕಿತ್ಸೆಯನ್ನು ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಪಡೆಯುತ್ತಿದ್ದರು,

ಇಂತಹ ಅವರು, ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅಂದಹಾಗೇ, ಮಹದೇವ್ ಪ್ರಕಾಶ್, ಈ ಭಾನುವಾರ ಎಂಬ ಪತ್ರಿಕೆಯ ಸಂಪಾದಕರಾಗಿಯೂ ಕೆಲಸ ಮಾಡುತ್ತಿದ್ದರು. ಈ ಹಿಂದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿಯೂ ಕೆಲಸ ಮಾಡಿದ್ದರು. ರಾಜ್ಯದಲ್ಲಿ ರಾಜಕೀಯ ವಿಶ್ಲೇಷಕರೆಂದೂ ಸಹ ಗುರ್ತಿಸಿಕೊಂಡಿದ್ದಂತ ಅವರು, ಇಂದು ಇನ್ನಿಲ್ಲವಾಗಿದ್ದಾರೆ.

ವರದಿ. ನಳಿನಿ ಬೆಂಗಳೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;