[5/15, 05:41] ಜಿಲ್ಲೆಯಲ್ಲಿ 390 ಜನರಿಗೆ ಕೋವಿಡ್ ಸೋಂಕು ದೃಢ: 80 ಮಂದಿ ಬಿಡುಗಡೆ
ಚಿತ್ರದುರ್ಗ,ಮೇ.14:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 390 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19,707 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 182, ಚಳ್ಳಕೆರೆ 57, ಹಿರಿಯೂರು 28, ಹೊಳಲ್ಕೆರೆ 30, ಹೊಸದುರ್ಗ 77, ಮೊಳಕಾಲ್ಮುರು ತಾಲ್ಲೂಕಿನಲ್ಲಿ 16 ಪ್ರಕರಣ ಸೇರಿದಂತೆ ಒಟ್ಟು 390 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 80 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 2139 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 390 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 19,707 ಕ್ಕೆ ಏರಿಕೆಯಾಗಿದೆ. ಕೋವಿಡ್ನಿಂದ ಇಂದು ಇಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 101 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 17,356 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2,250 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,59,469 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,45,728 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,23,932 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1352 ಜನರ ವರದಿ ಬರುವುದು ಬಾಕಿ ಇದೆ. 737 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
ಸೋಂಕು ಏರಿಕೆಯತ್ತ ಸಾಗುತ್ತಿದೆ ಚಿತ್ರದುರ್ಗ ಜಿಲ್ಲೆ.
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
