ಚಳ್ಳಕೆರೆ ತಾಲೂಕು ಅಧಿಕಾರಿಗಳ ಜೊತೆಗೂಡಿ ಕೋವಿಡ್ ಸೆಂಟರ್ ಗೆ ಭೇಟಿ.
ಚಳ್ಳಕೆರೆ ನಗರದ ಪಾವಗಡ ರಸ್ತೆಯ ಡಿ ದೇವರಾಜ್ ಆರಸ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ತಾತ್ಕಾಲಿಕ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ.
ಚಳ್ಳಕೆರೆ ತಾಲೂಕು ಸಾರ್ವಜನಿಕ ಅನುಕೂಲಕ್ಕಾಗಿ ಪರುಶುರಾಂಪುರದಲ್ಲಿ ಎರಡನೇ ಕೋವಿಡ್ ಸೆಂಟರ್ ಸ್ಥಾಪನೆ.
ರಾಜ್ಯದಾದ್ಯಂತ ಕೊರೊನಾ ಅಬ್ಬರ ಜೋರಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲೂ ಕೋವಿಡ್ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿರುವ ಬಗ್ಗೆ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ರವರು ಕಳವಳ ವ್ಯಕ್ತಪಡಿಸಿದ್ದು, ಚಳ್ಳಕೆರೆ ತಾಲೂಕು ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ಕೋವಿಡ್ ಸೆಂಟರ್ ಸ್ಥಾಪಿಸಲು ಮುಂದಾಗಿದ್ದಾರೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ರವರು ಇಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಕೋವಿಡ್ ಸೆಂಟರ್ ಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ವೇಳೆ ಅಧಿಕಾರಿಗಳಿಗಳೊಂದಿಗೆ ಚರ್ಚೆ ನಡೆಸಿದ ಮಾನ್ಯ ಶಾಸಕರು, ಚಳ್ಳಕೆರೆ ತಾಲೂಕಿನಾದ್ಯಂತ ಕೋವಿಡ್ ತಡೆಗಟ್ಟಲು ರಾಜ್ಯಸರ್ಕಾರದ ಕಟ್ಟುನಿಟ್ಟಿನ ಮಾರ್ಗ ಸೂಚನೆಗಳನ್ನು ಪಾಲಿಸಬೇಕಾಗಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೋಡಿದರು.
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
