ಚಿತ್ರದುರ್ಗ: ಮೊಳಕಾಲ್ಮೂರು/ ಮನೆ ಮನೆ ಸಮೀಕ್ಷೆಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ಕೊಂಡ್ಲಹಳ್ಳಿ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿವಕುಮಾರ್ ಹೇಳಿದರು. ಸಾರ್ವಜನಿಕರು ಲಸಿಕೆ ಪಡೆಯಬೇಕು ಲಸಿಕೆ ಕುರಿತು ಅನಗತ್ಯ ಗೊಂದಲಗಳಿಗೆ ಕಿವಿಗೊಡಬಾರದು ಅನಗತ್ಯವಾಗಿ ಮನೆಯಿಂದ ಹೊರಗಡೆ ಬರಬಾರದು. ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಆರಂಭಿಕ ಹಂತದಲ್ಲಿ ಸೂಕ್ತ ಚಿಕಿಸ್ತೆ ಪಡೆಯಿರಿ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಮ ಪಂಚಾಯಿತಿ ಪಿಡಿಒ ಆರ್ ಕೆಂಚಪ್ಪ ಮಾತನಾಡಿ ಆಶಾ ಅಂಗನವಾಡಿ ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ಹೊರ ಜಿಲ್ಲೆ ಹಾಗೂ ಬೆಂಗಳೂರಿನಿಂದ ಬಂದವರ ಮೇಲೆ ನಿಗಾ ವಹಿಸಿ ಮಾಹಿತಿ ನೀಡಬೇಕು ಎಂದರು. ಪಂಚಾಯಿತಿ ವತಿಯಿಂದ ಅಗತ್ಯ ಸ್ವಚ್ಛತೆ ಕೈಗೊಂಡಿದ್ದು ಸಿಬ್ಬಂದಿಗಳು ಇನ್ನಷ್ಟು ಕಾರ್ಯನಿರತರಗಬೇಕು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಕಾರ್ಯದರ್ಶಿ ಕೊಲ್ಲಣ್ಣ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
