ಬೆಂಗಳೂರು: ‘ತೌಕ್ತೆ’ ಚಂಡಮಾರುತದ ಪರಿಣಾಮ ಮೇ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ‘ತೌಕ್ತೆ’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮೇ 20ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
‘ಚಂಡಮಾರುತದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಅಲ್ಲದೆ, ಒಳನಾಡಿನಲ್ಲೂ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 16ರಂದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು. ಮುಂದುವರೆದು, ರಾಜ್ಯದ ಕರಾವಳಿಯನ್ನು ದಾಟಿ, ಮೇ 18ರಂದು ಗುಜರಾತ್ ಕರಾವಳಿ ತಲುಪಲಿದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.
ವರದಿ.ನಳಿನಿ ಬೆಂಗಳೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
