1ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆಗೆ ವಿದ್ಯುತ್ ಪೂರೈಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರಿಂದ ಚಾಲನೆ
ಬಳ್ಳಾರಿ, ಮೇ 17(ಕರ್ನಾಟಕ ವಾರ್ತೆ): ಜಿಂದಾಲ್ ಎದುರುಗಡೆ ನಿರ್ಮಿಸಲಾಗಿರುವ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಸೋಮವಾರ ಚಾಲನೆ ನೀಡಿದರು.
1ಸಾವಿರ ಆಕ್ಸಿಜನ್ ಬೆಡ್ ಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಪರಿವರ್ತಕಗಳ ಬಳಿಯ ಯಂತ್ರಗಳಿಗೆ ಸಚಿವ ಆನಂದಸಿಂಗ್ ಅವರು ಪೂಜೆ ಸಲ್ಲಿಸಿ ಬಟನ್ ಒತ್ತುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಮ್ಸ್ ನಿವೃತ್ತ ನಿರ್ದೇಶಕ ಡಾ.ದೇವಾನಂದ್, ತಾತ್ಕಾಲಿಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಂದಾಲ್ ಸಿಬ್ಬಂದಿ ಇದ್ದರು.
ವರದಿ. ಎಂ. ಎಲ್. ವೆಂಕಟೇಶ್ ಬಳ್ಳಾರಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
