;

ಎಸ್.ಎಸ್.ಎಲ್.ಸಿ -ದ್ವಿತೀಯ ಪಿಯು ಪರೀಕ್ಷೆ ರದ್ದು: ಸಚಿವರ ಸ್ಪಷ್ಟಣೆ…!!!

ಎಸ್.ಎಸ್.ಎಲ್.ಸಿ -ದ್ವಿತೀಯ ಪಿಯು ಪರೀಕ್ಷೆ ರದ್ದು: ಸಚಿವರ ಸ್ಪಷ್ಟಣೆ

ಬೆಂಗಳೂರು, ಮೇ 17 – ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳದ ಕಾರಣ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರರದ್ದು ಪಡಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೋವಿಡ್ ತೀವ್ರ ಪ್ರಸರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ .

ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿಕೊಂಡು ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕ ತೀರ್ಮಾನ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಎಂದಿನ ಅಧ್ಯಯನದಲ್ಲಿ ತೊಡಗುವಂತೆ ಸಚಿವರು ಮನವಿ ಮಾಡಿದ್ದಾರೆ.

ವರದಿ. ನಳಿನಿ ಬೆಂಗಳೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;