ಮಂಡ್ಯ: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೊತ್ತಮಾರನಹಳ್ಳಿ ಕೃಷ್ಣ ತಮ್ಮ ಮೈಸೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 2006 ರಿಂದ 2008 ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದ ಅವರು ಎಸ್.ಆರ್.ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.
ಕೆ.ಆರ್.ಪೇಟೆ ಕೃಷ್ಣ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 2006ರಿಂದ 2008ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1988 ಎಸ್.ಆರ್.ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿದ್ದ ಅವರು ಪಶುಸಂಗೋಪನೆ, ರೇಷ್ಮೆ ಖಾತೆಗಳನ್ನು ನಿರ್ವಹಿಸಿದ್ದರು. ಅಲ್ಲದೇ, 1996 ರಲ್ಲಿ ಮಂಡ್ಯ ಸಂಸದರಾಗಿಯೂ ಕೃಷ್ಣ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು.ಹಿರಿಯ ರಾಜಕಾರಣಿ, ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ರವರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಜ್ಯ ರಾಜಕಾರಣದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಹಿರಿಯ ರಾಜಕಾರಣಿ, ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ರವರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಜ್ಯ ರಾಜಕಾರಣದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ವರದಿ. ಮಂಜುನಾಥ್, ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
