ಇಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ , ಅನುದಾನ ರಹಿತ ಶಾಲಾ ಕಾಲೇಜುಗಳ ಸಿಬ್ಬಂದಿಗಳು ಲಾಕ್ ಡೌನ್ ಸಂಕಷ್ಟದಿಂದಾಗಿ ತಮ್ಮ ಜೀವನ ನಡೆಸುವುದು ಸಹ ಅತ್ಯಂತ ಕಠಿಣವಾಗಿರುವುದರಿಂದ
ವಿಶೇಷ ಆರ್ಥಿಕ ಪ್ಯಾಕೇಜ್ ಹಾಗೂ ಸಿಬ್ಬಂದಿಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಇನ್ನಿತರೆ ವಿಷಯಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಯಿತು. ಈ ವಿಷಯಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳು ಧನಾತ್ಮಕವಾಗಿ ಸ್ಪಂದಿಸಿ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಇವರಿಗೆ ಈ ಆರ್ಥಿಕ ಪ್ಯಾಕೇಜ್ ಗೆ ತಗಲುವ ವೆಚ್ಚ ಅಂದಾಜು ಎಷ್ಟಾಗಬಹುದು ಎಂಬ ಮಾಹಿತಿ ಪಡೆಯಲಾಯಿತು. ಇದಕ್ಕೆ ಮಾನ್ಯ ಶಿಕ್ಷಣ ಸಚಿವರು ಹಾಗೂ ಮಾನ್ಯ ಮುಖ್ಯ ಮುಖ್ಯಮಂತ್ರಿಗಳು ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀ ಪುಟ್ಟಣ್ಣ, ಶ್ರೀ ನಾರಾಯಣಸ್ವಾಮಿ ಶ್ರೀ ಹಣಮಂತ ನಿರಾಣಿ, ಶ್ರೀ ಅರುಣ ಶಹಾಪುರ, ಶ್ರೀ ಎಸ್ ವಿ ಸಂಕನೂರ ಹಾಗೂ ಶ್ರೀ ಚಿದಾನಂದಗೌಡ ಅವರು ಸಭೆಯಲ್ಲಿ ಉಪಸ್ಥಿತರಿದ್ದರು…
ವರದಿ. ಮಂಜುನಾಥ್ ದೊಡ್ಡಮನಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
