ಇಂದು ಮಹಾಜನದಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತರಿಗೆ ಮಾಸ್ಕ್, ಸ್ಯಾನಿಟೈಸರ್, ಫೇಸ್ ಶೀಲ್ಡ್, ಹ್ಯಾಂಡ್ ಗ್ಲೌಸ್ ಗಳನ್ನು ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷರು ಹಾಗೂ ಮಹಾಜನದಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸೇತುರಾಮ್ ನಾಯ್ಕ್ ಬಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಕುಂತಲಮ್ಮ, ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಣಿ ಸದಸ್ಯರಾದ ವಿ ರವಿನಾಯ್ಕ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಹಾಗೂ ಪಂಚಾಯಿತಿ ಸದಸ್ಯರಾದ ಶಶಿಕುಮಾರ, ಕೊಟ್ರೇಶ್ , ಬಸವರಾಜ, ಹಾಗೂ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.ಹಾಗೂ ಸೇತುರಾಮ್ ನಾಯ್ಕ್ ಬಿ.ಸಿಅಧ್ಯಕ್ಷರು, ತಾಲ್ಲೂಕು ಬಿಜೆಪಿ ಯುವ ಮೋರ್ಚಾ ಹೂವಿನಹಡಗಲಿ.ಉಪಾಧ್ಯಕ್ಷರು, ಗ್ರಾಮ ಪಂಚಾಯತಿ ಮಹಾಜನದಹಳ್ಳಿ…
ವರದಿ. ಬಸಣ್ಣಿ, ಬಿ, ಎಂ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
