ಪಟ್ಟಣದ ಬೀದಿಬದಿ ವ್ಯಾಪಾರಿಗಳಿಗೆ ಕಡ್ಡಾಯವಾಗಿ ಕೋವಿಡ್-19 ಲಸಿಕೆಯನ್ನು ತಪ್ಪದೇ ಹಾಕಿಸಿಕೊಳ್ಳುವಂತೆ ಪಂಚಾಯತಿ ಮುಖ್ಯ ಅಧಿಕಾರಿ ಸೂಚನೆ…!!!

ದಿನಾಂಕ 28. 5 2021. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು.
ಪಟ್ಟಣದ ಬೀದಿಬದಿ ವ್ಯಾಪಾರಿಗಳಿಗೆ ಕಡ್ಡಾಯವಾಗಿ ಕೋವಿಡ್-19 ಲಸಿಕೆಯನ್ನು ತಪ್ಪದೇ ಹಾಕಿಸಿಕೊಳ್ಳುವ ವಂತೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಫಕ್ರುದಿನ್ ಸಾಬ್ ತಮ್ಮ ಇಲಾಖೆಯ ಸಿಬ್ಬಂದಿಗಳಿಗೆ ಪಟ್ಟಣದ ಬೀದಿಬೀದಿಗಳಲ್ಲಿ ನ ಬೀದಿ ವ್ಯಾಪಾರಿಗಳಿಗೆ ಜಾಗೃತಿ ಮೂಡಿಸುವಂತೆ ಸೂಚಿಸಿದರು, ಅಧಿಕಾರಿಗಳ ಸೂಚನೆ ಮೇರೆಗೆ ಇಲಾಖೆಯ ವಾಹನದ ಧ್ವನಿವರ್ಧಕದ ಮೂಲಕ ಪಟ್ಟಣದಲ್ಲಿ ಬೀದಿ ಬದಿ ವ್ಯಾಪಾರ ಮಾಡುವ ಎಲ್ಲಾ ವ್ಯಾಪಾರಿಗಳು ಕಡ್ಡಾಯವಾಗಿ ತಮ್ಮ ಆಧಾರ ಕಾರ್ಡುಗಳನ್ನು ತೆಗೆದುಕೊಂಡು ಬಂದು ಕೋವಿಡ್ 19 ರ ಲಸಿಕೆಯನ್ನು ಹಾಕಿಸಿಕೊಳ್ಳುವ ಅಂತೆ ಜಾಗೃತಿ ಮೂಡಿಸುವುದರ ಜೊತೆಗೆ ವ್ಯಾಪಾರಿಗಳನ್ನು ವ್ಯಾಕ್ಸಿನ್ ಕೇಂದ್ರದ ಹತ್ತಿರ ಕರೆತಂದು ವ್ಯಾಕ್ಸಿನ್ ಲಸಿಕೆ ಹಾಕುವಲ್ಲಿ ಜವಾಬ್ದಾರಿ ವಹಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಫಕ್ರುದಿನ್ ಸಾಬ್, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆಯ ಲಕ್ಷ್ಮಿ, ಬೀದಿಬದಿ ವ್ಯಾಪಾರ ಮಾಡುವ ವ್ಯಾಪಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು..

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend