ಕೂಡ್ಲಿಗಿ: ಲೇ..ಕೊರೊನವ್ವ, ಊರು ಕಡೆ ತಲೆ ಹಾಕಿದ್ರೆ ಸರಿ ಕಾಣಲ್ಲ, ತಿರುಗಿ ನೋಡ್ದಂಗೆ ಸುಮ್ನೆ ಹೋಗು.!!

ವಿಜಯನಗರ: ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ವ್ಯಾಪ್ತಿಯ ತಿಪ್ಪೇಹಳ್ಳಿ ಗ್ರಾಮದಲ್ಲಿ (ಜೂ-1):  ತಾಲೂಕಿನ ಕಾನಹೊಸಹಳ್ಳಿ ಸಮೀಪದ ತಿಪ್ಪೇಹಳ್ಳಿ ಗ್ರಾಮಸ್ಥರು ಮಹಾ ಮಾರಿ ಕೊರೊನವ್ವಳ ಓಡಿಸಿದ ಬಗೆ ಇದು. ಲೇ…. ಕೊರೊನವ್ವ, ಊರು ಕಡೆ ತಲೆ ಹಾಕಿದ್ರೆ ಸರಿ ಕಾಣಲ್ಲ ನೋಡು. ತಿರುಗಿ ನೋಡ್ದಂಗೆ ಸುಮ್ನೆ ಹೊಂಟೋಗ್ತಿರಬೇಕು. ಗ್ರಾಮದ ಹಿರಿಯರ ಕೈಯಲ್ಲಿ ಪುಟ್ಟದೊಂದು ಮಣ್ಣಿನ ಕುಡಿಕೆ ಇಟ್ಟುಕೊಂಡು ಅದರಲ್ಲಿ ಬೇವಿನ ಸೊಪ್ಪು ತುಂಬಿ ಊರ ಮುಂದಿನ ಮಾರಮ್ಮನ ದೇವಸ್ಥಾನ ಮುಂಬಾಗ ಬಳಿ ಸಾಮೂಹಿಕ ಪೂಜೆ ನೆರವೇರಿಸಿದರು. ನಂತರ ಅದನ್ನು ಹೊತ್ತೊಯ್ದು ಗಡಿ ದಾಟಿಸಿದರು. ಮರಳಿ ಬರುವಾಗ ಕೊರೊನವ್ವ ಊರು ಕಡೆ ತಲೆ ಹಾಕಿದ್ರೆ ಸರಿ ಕಾಣಲ್ಲ ಅಂತ ಬೈದು ಅಟ್ಟಿದರು. ಅಲ್ಲಿಗೆ ಮಾರಿಯೊಂದನ್ನು ಓಡಿಸಿದ ಸಂತೃಪ್ತ ಬಾವ ಅವರದ್ದು. ಇಂದಿಗೂ ಕೂಡ ಗಾಳಿ(ಸೋಂಕು) ಮಾರವ್ವ, ದುರುಗವ್ವ ಅಂದೆಲ್ಲ ದೇವರುಗಳು ಹಳ್ಳಿಗಳಲ್ಲಿವೆ. ಪ್ರತಿ ವರ್ಷ ಊರು ಅಮ್ಮನ ಹಬ್ಬ ಮಾಡಿಕೊಂಡು ಎಲ್ಲರೂ ಊಟ ಮಾಡುತ್ತಾರೆ. ಗ್ರಾಮೀಣ ಭಾಗದ ತಿಪ್ಪೇಹಳ್ಳಿಯಲ್ಲಿ ಇಂತಹದ್ದೊಂದು ಆಚರಣೆ ಚಾಲ್ತಿಯಲ್ಲಿದೆ. ಮೊರಗಳಲ್ಲಿ ಸಾವಿರಾರು ಹೋಳಿಗೆಗಳ ನೀಟಾಗಿ ಜೋಡಿಸಿ, ಕುಡಿಕೆ, ಬೇವಿನಸೊಪ್ಪು ಇಟ್ಟು ಪೂಜೆ ಮಾಡಿ ಊರ ಗಡಿ ದಾಟಿಸಿ ಬರುತ್ತಾರೆ. ಊರಿಗೆ ಅಂಟಿದ ಪೀಡೆ ನಿವಾರಣೆ ಆಯಿತೆಂಬ ನಂಬಿಕೆ ಅವರದ್ದು. ಈ ಒಂದು ಕಾರ್ಯಕ್ರಮಕ್ಕೆ ಊರಿನ ಗ್ರಾಮಸ್ಥರು ಉಪಸ್ಥಿತರು.

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend