ಮೊಳಕಾಲ್ಮೂರು: ನಲ್ಲಿಂದು 8 ಜನರಿಗೆ ಕೊರೊನಾ ಸೋಂಕು ದೃಢ.!!

ಚಿತ್ರದುರ್ಗ: ಮೊಳಕಾಲ್ಮೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲಿದೆ. ಆದರೆ, ಮೊಳಕಾಲ್ಮೂರು ತಾಲೂಕಿನಲ್ಲಿ ಭಾನುವಾರದಂದು ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ತಾಲೂಕಿನಾದ್ಯಂತ ಕೇವಲ 8 ಜನರಿಗೆ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದ್ದು, ಮೊಳಕಾಲ್ಮೂರು ಪಟ್ಟಣದಲ್ಲಿ 2, ನಾಗಸಮುದ್ರ ದಲ್ಲಿ, ಕೋನಸಾಗರ, ತುಮಕೂರ್ಲಹಳ್ಳಿ, ಚಿಕ್ಕುಂತಿ, ಚಿಕ್ಕೇರಹಳ್ಳಿ,ಓಬಳಾಪುರ ಗ್ರಾಮದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಿಂದ ತಿಳಿದುಬಂದಿದೆ. ಸೋಂಕಿತರನ್ನು ಮೊಳಕಾಲ್ಮೂರು ಮುರಾರ್ಜಿಶಾಲೆ ಹಾಗೂ ಆದರ್ಶ ಶಾಲೆಯ ಹಾಸ್ಟೆಲ್ ಕಟ್ಟಡದ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದಂತೆ ಉಸಿರಾಟದ ತೊಂದರೆ ಇರುವ ಸೋಂಕಿತರಿಗೆ ಮೊಳಕಾಲ್ಮೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend