ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದು ಅಡುಗೆ ಅನಿಲ, ಡೀಸೆಲ್ ಹಾಗೂ ಪೆಟ್ರೋಲ್ ಬೆಲೆಗಳನ್ನು ಕೂಡಲೇ ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಧಾನಿ ಮೋದಿಯವರು ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಾ ದೇಶವನ್ನು ಸಂಕಷ್ಟದ ಪರಿಸ್ಥಿತಿಗೆ ದೂಡಿದ್ದಾರೆಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಎಸ್‌ಎಲ್‌ವಿ ಪೆಟ್ರೋಲ್ ಬಂಕ್ ಬಳಿ (ಜೂನ್ 12) ರಂದು ಬ್ಲಾಕ್ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸಹಯೋಗದಲ್ಲಿ ಪೆಟ್ರೋಲ್ ದರ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಬಡವರು ಬದುಕು ನಿರ್ವಹಣೆ ಕಷ್ಟವಾಗಿದೆ. ದೇಶದಲ್ಲಿ ‘ ಅರಾಜಕತೆ ಸೃಷ್ಟಿ ಯಾಗಿದೆ ಎಲ್ಲವನ್ನು ಮರೆತ ಬಿಜೆಪಿ ಸರ್ಕಾರ ಬಂಡತನ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ಹೊಣೆಗೇಡಿ ತನದಿಂದಾಗಿ ದೇಶ ಹಾಗು ರಾಜ್ಯದಲ್ಲಿ ಕೊರೊನಾ ಸಂಕಷ್ಟ ಎದುರಾಗಲು ಕಾರಣವಾಗಿದೆ. ಬೆಡ್‌ಗಳು, ಆಕ್ಸಿಜನ್, ಸಿಗದೆ ಸಾವಿರಾರು ಸಂಖ್ಯೆಯಲ್ಲಿ ಸಾವು ನೋವುಗಳನ್ನು ಉಂಟಾಗಿವೆ. ಕೊರೋನಾ ವೈರಸ್ ತಡೆಗಟ್ಟುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು ಸುಳ್ಳುಗಳನ್ನು ಹೇಳಿಕೊಂಡು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ.
ಪಟ್ಟಣ ಪಂಚಾಯತಿ ಸದಸ್ಯರಾದ ಯುವ ಕಾಂಗ್ರೆಸ್ ಡಾ” ದಾದಾಪೀರ್ ಅವರು ಹೇಳಿದರು. ಈ ಕೂಡಲೆ ತೈಲ ಬೆಲೆ ಕಡಿಮೆ ಗೊಳಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಮತ್ತು ಯುತ್ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ವಿವಿಧ ಪೆಟ್ರೋಲ್ ಬಂಕ್‌ಗಳ ಬಳಿ ಕ್ರಿಕೆಟ್ ಆಡುವ ಮೂಲಕ ತೈಲ ಬೆಲೆ ಏರಿಕೆಯನ್ನು ಖಂಡಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶ್ರೀನಿವಾಸ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಉಪಾಧ್ಯಕ್ಷ ದರ್ಶನ್, ಕಾರ್ಯದರ್ಶಿ ಜಿ.ಎನ್.ಜಗದೀಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ಲಾ ಖಾದರ್, ಮೈನಾರಿಟಿ ಘಟಕದ ಅಧ್ಯಕ್ಷ ಬುಬೇರ್ ಅಹಮದ್, ಎಸ್‌ಟಿ ಸೆಲ್ ರಾಜ್ಯ ಮುಖಂಡ ಭಕ್ತ ಪ್ರಹ್ಲಾದ್, ಹಿರಿಯ ವಕೀಲ ಆರ್.ಎಂ.ಅಶೋಕ, ವಿಜಯಕುಮಾರ್, ಮಲ್ಲಿಕಾರ್ಜುನ, ಎಸ್‌ಎಲ್‌ವಿ ವೆಂಕಟೇಶ, ಶಿವಲಿಂಗಪ್ಪ, ಗೋಪಾಲ್, ನಜೀರ್ ಸಾಬ್, ನಾಗರಾಜ, ಚಂದ್ರಣ್ಣ ಆರೀಪ್ ಮಹಮದ್, ಕಿರಣ್ ವಾಂಜೆ, ಮಹಮದ್ ರಫಿ ಮುಂತಾದವರು ಉಪಸ್ಥಿತರು.

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
