ಚಿತ್ರದುರ್ಗ: ಮೊಳಕಾಲ್ಮೂರು ಬ್ಲಾಕ್ ಫಂಗಸ್ ರೋಗಿಯೊಬ್ಬ ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ತಾಲೂಕಿನ ಗುಂಡ್ಲೂರು ಗ್ರಾಮದ ಸುಮಾರು 60 ವರ್ಷದ ವ್ಯಕ್ತಿ ಎನ್ನಲಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ಬ್ಲಾಕ್ ಫಂಗಸ್ ರೋಗಕ್ಕೆ ತುತ್ತಾಗಿದ್ದ ಈ ವ್ಯಕ್ತಿ, ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದಲ್ಲೂ ಚಿಕಿತ್ಸೆ ಪಡೆದುಕೊಂಡರೂ ಗುಣಮುಖರಾಗದ ಕಾರಣ, ಮತ್ತೆ ವಾಪಾಸ್ ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಾಲೂಕು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ..

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
