ಮೊಳಕಾಲ್ಮೂರು: 16 ಗ್ರಾಮ ಪಂಚಾಯಿತಿಗಳಲ್ಲಿ ಸಸಿ ನೀಡುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದ; ಪರಿಸರ ಪ್ರೇಮಿ ರಾಘವೇಂದ್ರ.!

ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕು ಕೋನಸಾಗರ ಗ್ರಾಮ ಪಂಚಾಯಿತಿ ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಇಂದು ಪರಿಸರ ಪ್ರೇಮಿ ರಾಘವೇಂದ್ರರವರು 16 ಪಂಚಾಯಿತಿಗೆ ಗಿಡಗಳನ್ನು ವಿತರಿಸುವ ಕಾರ್ಯಕ್ರಮ ಮತ್ತು ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಎಲ್ಲ ಪಂಚಾಯಿತಿಗಳಲ್ಲಿ 500 ರಿಂದ 800 ಗಿಡಗಳ ವರೆಗೂ ನೀಡುವ ಕಾರ್ಯಕ್ರಮವನ್ನು ಮಾಡಿದ್ದಾರೆ ದಿನಾಂಕ 25/06/2021 ರಂದು ಇವರು ಗಿಡಮರಗಳನ್ನು ಇವರ ಉಸಿರೆಂದು ಸುಮಾರು 7ರಿಂದ 8 ವರ್ಷಗಳಿಂದ ಗಿಡಮರಗಳನ್ನು ಹಾದಿಬದಿಯಲ್ಲಿ ನೆಟ್ಟು ಶಾಲಾ-ಕಾಲೇಜುಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಹಾಗೂ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಸಿ ನೀಡುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು. ಈ ಕಾರ್ಯಕ್ರಮಕ್ಕೆ ಸಾಥ್ ನೀಡುವವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಬಾಂಡ್ರಾವಪ್ಪ, ಹಾಗೂ ಗ್ರಾ.ಪಂ ಅಧ್ಯಕ್ಷರಾದ ರತ್ನಮ್ಮ, ಬಿಲ್ ಕಲೆಕ್ಟರ್ ತಿಪ್ಪೇಸ್ವಾಮಿಯವರು, ಹಾಗೂ ಎರಿಸ್ವಾಮಿ, ಗುರುಸ್ವಾಮಿ, ಕೆ.ಪಿ ರುದ್ರಸ್ವಾಮಿ, ಅಂಜಿನಿ ಮುಂತಾದವರು ಉಪಸ್ಥಿತರಿದ್ದರು..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend