ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ದಿನಸಿ ವಿತರಣೆ…!!!

ಶಾಸಕ ಟಿ ರಘುಮೂರ್ತಿ ನೇತೃತ್ವದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ದಿನಸಿ ವಿತರಣೆ.

ಚಿತ್ರದುರ್ಗ ಜಿಲ್ಲೆಯ ವಿವಿಧ ಶ್ರೀಗಳ ಸಮ್ಮುಖದೊಂದಿಗೆ ದಿನಸಿ ವಿತರಿಸಿದ ಶಾಸಕ ಟಿ ರಘುಮೂರ್ತಿ.

ಕೊರೋನಾ ಸಂಕಷ್ಟದಲ್ಲಿರುವ ಕೋವಿಡ್ ವಾರಿಯರ್ಸ್‌ ಗಳಿಗೆ ದಿನಸಿ ವಿತರಣೆ.

ಚಿತ್ರದುರ್ಗ ತಾಲೂಕು ತುರುವನೂರು ಗ್ರಾಮಪಂಚಾಯಿಯಲ್ಲಿ ದಿನಸಿ ಕಿಟ್ ವಿತರಣೆ ಕಾರ್ಯಕ್ರಮ ಆಯೋಜನೆ.

ರಾಜ್ಯವನ್ನು ಬೆಂಬಿಡದೆ ಕಾಡುತ್ತಿರುವ ಕೋವಿಡ್ ನಿಯಂತ್ರಿಸಲು ಅವಿರತವಾಗಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್‌ ಗಳ ಕಾರ್ಯ ನಿಜಕ್ಕೂ ಶ್ಲಾಘನೀಯ. ಕೋವಿಡ್ ಸಂಕಷ್ಟದಲ್ಲೂ ಅವಿರತವಾಗಿ ಕೆಲಸ ನಿರ್ವಹಿಸುತ್ತಿರುವ ಕೋವಿಡ್ ವಾರಿಯರ್ಸ್‌ ಗಳ ಸಂಕಷ್ಟ ಆಲಿಸುವ ಸಲುವಾಗಿ ವಾಗಿ ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ಅವರು ನೇತೃತ್ವದಲ್ಲಿ ತುರುವನೂರು ಹೋಬಳಿಯ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬೋವಿಗುರುಪೀಠದ ಶ್ರೀಗಳಾದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಹಾಗೂ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ದಿವ್ಯಸಾನಿಧ್ಯದೊಂದಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು..

ಈ ಸಂದರ್ಭದಲ್ಲಿ…. ತುರುವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾರದಾ ರಮೇಶ್ ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಹನುಮಂತಪ್ಪ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಗಿರೀಶ್ ಸಿಡಿಪಿಓ ನರಸಿಂಹರಾಜು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರು ಸಾರ್ವಜನಿಕರು ಹಾಜರಿದ್ದರು..

ವರದಿ.ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend