ಹೂಡೇಂ: ಬದು ನಿರ್ಮಾಣ, ಕೃಷಿ ಹೊಂಡ, ಕಾಮಗಾರಿಯನ್ನು ಪರಿಶೀಲನೆ.!

ವಿಜಯನಗರ: ಕೂಡ್ಲಿಗಿ ತಾಲೂಕಿನ ಹೂಡೇಂ ಗ್ರಾಮ ಪಂಚಾಯಿತಿಯಲ್ಲಿ ಇಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಹಯೋಗದೊಂದಿಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಾದ ಮಾರೇಶ್ ಅವರು ರೈತರ ಹೊಲಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಕಾಮಗಾರಿಯನ್ನು ಪರಿಶೀಲನೆ ಮಾಡಿ ನಂತರ ಮಾತನಾಡಿದರು. ರೈತರ ಹೊಲಗಳಲ್ಲಿನ ಪಲವತ್ತಾದ ಮಣ್ಣು ಕೊಚ್ಚಿ ಹೋಗುವುದನ್ನು ತಡೆಯಲು, ಮಳೆ ನೀರು ಇಂಗಿಸಲು ಬದುಗಳನ್ನು ನಿರ್ಮಿಸಲಾಗುತ್ತಿದೆ.

10 ಅಡಿ ಉದ್ದ, 4 ಅಡಿ ಅಗಲ, 1.5 ಅಡಿ ಆಳದ ತಗ್ಗುಗಳನ್ನು ನಿರ್ಮಿಸಲಾಗುತ್ತಿದೆ. ಪ್ರತಿ ತಗ್ಗು 2,050 ಲೀಟರ್ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುತ್ತದೆ. ಕೊರೊನಾ ವೈರಸ್ ಪರಿಣಾಮ ನಗರ ಪ್ರದೇಶದಿಂದ ಗ್ರಾಮಗಳಿಗೆ ಮರಳಿರುವ ಕಾರ್ಮಿಕರು ಬದು ನಿರ್ಮಾಣ ಕೆಲಸಗಳಲ್ಲಿ ತೊಡಗಿದ್ದಾರೆ. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪ್ರತಿ ಕಾರ್ಮಿಕರಿಗೆ ದಿನದ ದುಡಿಮೆಗೆ ₹289+10 ರೂ ಕೂಲಿ ಕೊಡಲಾಗುತ್ತಿದೆ ಎಂದು ತಿಳಿಸಿದ್ದಾರು. ಈ ಸಂದರ್ಭದಲ್ಲಿ ಗ್ರಾ.ಪಂ ಬಿಲ್ ಕಲೆಕ್ಟರ್ ತಿಪ್ಪೇಸ್ವಾಮಿ, ಮೇಟಿ ನಾಗರಾಜ್, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಹಾಗೂ ಕೂಲಿ ಕಾರ್ಮಿಕರು ಇದ್ದರು.

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend