ಮೊಳಕಾಲ್ಮೂರು: ನೊಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗಳಿಗೆ ಆಹಾರ ಸಾಮಗ್ರಿಗಳ ಕಿಟ್ವ ವಿತರಣೆ; ಸಚಿವರಾದ ಬಿ ಶ್ರೀ ರಾಮುಲು.!

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ, ಬೆಂಗಳೂರು ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಚಿತ್ರದುರ್ಗ ಇವರ ವತಿಯಿಂದ ಕೋವಿಡ್ 19 ಸಾಂಕ್ರಾಮಿಕ ರೋಗದ 2ನೇ ಅಲೆಯ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಬಿ ಶ್ರೀ ರಾಮುಲು ರವರು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಹಾರ ಧಾನ್ಯ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಿದರು. ಈ ಸಂಧರ್ಭದಲ್ಲಿ ತಹಶೀಲ್ದಾರರಾದ ಟಿ ಸುರೇಶ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಪಿ ಲಕ್ಷ್ಮಣ ,ಬಿಜೆಪಿ ಮಂಡಲಾಧ್ಯಕ್ಷರಾದ ಮಂಜುನಾಥ ಸಿಪಿಐ ತಾಲ್ಲೂಕು ಘಟಕ ಅಧ್ಯಕ್ಷರಾದ ಜಾಫರ್ ಷರೀಫ್ , ತಾಲೂಕು ಕಾರ್ಮಿಕ ನೀರಿಕ್ಷಕರಾದ ಕುಸುಮ ಹಾಗೂ ವಿವಿಧ ಸಂಘದ ಪದಾಧಿಕಾರಿಗಳು ಹಾಜರಿದ್ದರು..

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend