ಶೀಘ್ರದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ- ಸಚಿವರಾದ ಬಿ.ಶ್ರೀರಾಮುಲು.!

ಚಿತ್ರದುರ್ಗ: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಹಳ್ಳಿ ಹತ್ತಿರ ಮಂಗಳವಾರ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಅವರು ಮಾತನಾಡಿದರು. ಚಿತ್ರದುರ್ಗ ಜಿಲ್ಲೆಯ ಕುಡಿಯುವ ನೀರಿನ ಮತ್ತು ನೀರಾವರಿ ಬೇಡಿಕೆಯನ್ನು ನೀಗಿಸುವ ಸಲುವಾಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯು ನಡೆಯುತ್ತಿದ್ದು, ಕಾಮಗಾರಿಯು ಬಹಳಷ್ಟು ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಬರುವ ಫೆಬ್ರವರಿ ತಿಂಗಳೊಳಗೆ ಕಾಮಗಾರಿ ಮುಕ್ತಾಯವಾಗಲಿದೆ ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಬೇಕು ಎಂಬ ಪ್ರಕ್ರಿಯೆ ಕೊನೆಯ ಹಂತದಲ್ಲಿ ಬಾಕಿ ಉಳಿದಿದ್ದು, ಆದಷ್ಟು ಶೀಘ್ರದಲ್ಲಿಯೇ ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ಬರುವ ಚಿತ್ರದುರ್ಗ ಶಾಖಾ ಕಾಲುವೆಯ ಸರಪಳಿ ಸುಮಾರು 120.82 ಕಿ.ಮೀ (ಬೆಳಘಟ್ಟ ಗ್ರಾಮದ ಬಳಿ)ನಿಂದ ಕವಲೊಡೆದು ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳಿಗೆ ಗುರುತ್ವಾಕರ್ಷಣೆಯ ಮೂಲಕ 59 ಕೆರೆಗಳಿಗೆ (ಮೊಳಕಾಲ್ಮುರು ಮತಕ್ಷೇತ್ರದ 53 ಕೆರೆಗಳು ಹಾಗೂ ಚಳ್ಳಕೆರೆ ಮತಕ್ಷೇತ್ರದ 6 ಕೆರೆಗಳಿಗೆ 1.412 ಟಿಎಂಸಿ ನೀರು ಹಂಚಿಕೆಯಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯಿಂದ ಮೊದಲ ಆದ್ಯತೆಯಾಗಿ ರೈತರ ಹೊಲಗಳಿಗೆ ಹಾಗೂ ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಂಡಿದ್ದು, ಮುಂಬರುವ ಫೆಬ್ರವರಿ ತಿಂಗಳೊಂಗೆ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಮುಕ್ತಾಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಸೂಪರಿಡೆಂಟ್ ಇಂಜಿನಿಯರ್ ಶಿವಪ್ರಕಾಶ್, ಕಾರ್ಯಪಾಲಕ ಇಂಜಿನಿಯರ್ ಮುದ್ದುಕುಮಾರ್, ತಹಶೀಲ್ದಾರ್ ಮಲ್ಲಿಕಾರ್ಜುನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವರದಿ. ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend