;

ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳ ಜನ್ಮ ದಿನದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆ ಶಿಭಿರ…!!!

ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳ ಜನ್ಮ ದಿನದ ಅಂಗವಾಗಿ ಉಚಿತ ಕಣ್ಣಿನ ತಪಾಸಣೆ ಶಿಭಿರ

ಹೊಳಲ್ಕೆರೆ ಪಟ್ಟಣದ ಅಂಬೇಡ್ಕರ್ ಬಯಲು ರಂಗಮಂದಿರದ ಬಳಿ ದೃಷ್ಟಿ ಕಣ್ಣಿನ ಆಸ್ಪತ್ರೆ, ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳ ಜನ್ಮ ದಿನದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಉಚಿತ ಸೌಲಭ್ಯದ ಸದಾವಕಾಶವನ್ನು ಪಡೆದುಕೊಂಡರು. ಶಿಬಿರದಲ್ಲಿ ರಿಯಾಯಿತಿ ದರದಲ್ಲಿ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕಗಳನ್ನು ನೀಡಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈಶ್ವರಿ ವಿಶ್ವ ವಿದ್ಯಾನಿಲಯದ ಸಂಚಾಲಕಿ ಬಿ.ಕೆ. ಸುಮಿತ್ರಕ್ಕ ಉದ್ಘಾಟಿಸಿದರು. ಸರಕಾರಿ ರಾಜ್ಯ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎನ್. ಶಿವಮೂರ್ತಿ, ಡಿಎಸ್‌ಎಸ್ ರಾಜ್ಯ ಸಂಚಾಲಕ ಪಾಂಡುರಂಗಸ್ವಾಮಿ, ಜಿಲ್ಲಾ ಸಂಚಾಲಕ ಕೆಂಗುಂಟೆ ಜಯ್ಯಣ್ಣ, ಪ್ರಕಾಶ್, ಸುಂದರ್, ದಾಸಿಕಟ್ಟೆ ಮಂಜು, ಲಯನ್ಸ್ ಕ್ಲಬ್ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಖಜಾಂಚಿ ವಿಜಯಕುಮಾರ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ಮಹಾಂತೇಶ್ ಇತರರು ಇದ್ದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಮನೋಹರ್ ಕಾರ್ಯಕ್ರಮವನ್ನು ನಿರೂಪಿಸಿದರು…

ವರದಿ. ಸುರೇಶ್ ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;