;

ಮೇಲ್ಛಾವಣಿ ಕುಸಿದು ಇಬ್ಬರಿಗೆ ಗಾಯ…!!!

ಮೇಲ್ಛಾವಣಿ ಕುಸಿದು ಇಬ್ಬರಿಗೆ ಗಾಯ

ತಾಲೂಕಿನ ಚಿತ್ರಹಳ್ಳಿ ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಗೆ ಮನೆಯ ಮೇಲ್ಛಾಣಿ ಕುಸಿದು ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಗಾಯಾಳುಗಳನ್ನು ಸುನಿಲ್, ವನಿತಾ ಎಂದು ಗುರುತಿಸಲಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಾಳುಗಳು ಗುಡಿಸಲು ನಿರ್ಮಿಸಿ, ಅದರ ಮೇಲೆ ಅಂಚು ಹೊಂದಿಸಿಕೊಂಡು ಹಲವು ವರ್ಷಗಳಿಂದ ಜೀವನ ಮಾಡುತ್ತಿದ್ದರು. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಗುಡಿಸಲು ಮನೆ ಸಂಪೂರ್ಣ ನೆಲಕಚ್ಚಿದೆ. ಇದ್ದ ಒಂದು ಮನೆಯನ್ನು ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿರುವ ಈ ಕುಟುಂಬಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆಯ ವೆಚ್ಚ ಭರಿಸಲು ಕೂಡ ಕಷ್ಟವಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ…

ವರದಿ. ಸುರೇಶ್ ಹೊಳಲ್ಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;