ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿ ಇಂದು (ಜು,25) ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಉಸ್ತುವಾರಿಗಳಾದ ವಿ.ಎಸ್.ಉಗ್ರಪ್ಪ ಅವರ ಜೊತೆಗೂಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಸೈಕಲ್ ಜಾತ, ನಾಯಕರು ಎತ್ತಿನ ಗಾಡಿ ಏರಿ ಬಂದಿದ್ದು ವಿಶೇಷವಾಗಿ ಕಂಡು ಬಂತು ಈ ಮೂಲಕ ಪ್ರತಿಭಟನೆ ನಡೆಸಲಾಯಿತು. ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಾ.ಬಿ.ಯೋಗೇಶ್ ಬಾಬು ಅವರು ಪಾಲ್ಗೊಂಡು, ಮಾತನಾಡುತ್ತ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಉಗ್ರವಾಗಿ ಖಂಡಿಸಿದರು. ಮಾಜಿ ಶಾಸಕರಾದ ತಿಪ್ಪೇಸ್ವಾಮಿ ಅವರು ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಗುಡಿಗಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಿಜೆಪಿ ನಾಯಕರು ಸುಳ್ಳು ಭರವಸೆಗಳನ್ನು ನೀಡುತ್ತಾ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸಮಾಡುತ್ತಿದ್ದು ಆಧುನಿಕ ಬಸ್ಮಾಸುರಂತೆ ಆಡಳಿತ ನಡೆಸುತ್ತಿದ್ದಾರೆಂದು ಕೆಪಿಸಿಸಿ ಜಿಲ್ಲಾ ಉಸ್ತುವಾರಿಯಾದ ವಿ.ಎಸ್. ಉಗ್ರಪ್ಪ ಅವರು ಮಾತನಾಡಿದರು. ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುತ್ ಕಾಂಗ್ರೆಸ್ ವತಿಯಿಂದ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿ ನಡೆದ ಸೈಕಲ್ ಜಾತ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ದೇಶದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡರಿದಂತೆ ಅಗತ್ಯ ವಸ್ತುಗಳನ್ನು ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಡೀಸೆಲ್ ದರ ಗಗನಕ್ಕೇರಿದೆ. ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಪ್ರಧಾನಿ ಮೋದಿಯವರು ಧರ್ಮದ ಹೆಸರಲ್ಲಿ ಯುವಕರಿಗೆ ಕೋಮುವಾದದ ವಿಷ ಬೀಜವನ್ನು ಬಿತ್ತಿ ಮರಳು ಮಾಡುತ್ತಾ ಜಾತಿ ಧರ್ಮದ ಹೆಸರಲ್ಲಿ ಜನತೆಯನ್ನು ಒಡೆಯುತ್ತಿದ್ದಾರೆ. ಯಾವುದೇ ಅಭಿವೃದ್ದಿಗಳನ್ನು ಮಾಡದೆ ದೇಶದಲ್ಲಿ ಆದುನಿಕ ಭಸ್ಮಾಸುರರಂತಾಗಿದ್ದಾರೆ ಎಂದರು. ರಾಮ ರಾಜ್ಯ ಮಾಡುತ್ತೇವೆಂದು ಹೇಳುತ್ತಾ ಜನತೆಯನ್ನು ಹಾಳು ಮಾಡುತ್ತಿರುವ ಪ್ರಧಾನಿ ಮೋದಿಯವರ ಜನಸಾಮಾನ್ಯರ ಬದುಕನ್ನು ಕಸಿದುಕೊಂಡಿದ್ದಾರೆ. ರಾಮ ಹುಟ್ಟಿದ ನಾಡಿನದಲ್ಲಿ ಅಗತ್ಯ ವಸ್ತುಗಳು ಸೇರಿದಂತೆ ಪೆಟ್ರೋಲ್, ಡೀಸೆಲ್ ದರ ಮೂರಂಕಿದಾಟಿದೆ. ಆದರೆ ರಾವಣನರಾಜ್ಯದಲ್ಲಿ ಇಂದಿಗೂ ಎರಡಂಕಿಯಲ್ಲಿದೆ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಜನತೆಯನ್ನು ಮರೆತು ಕುರ್ಚಿ ಉಳಿಸಿಕೊಳ್ಳಲು ಕಿತ್ತಾಡುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಕೇಂದ್ರ ಮತ್ತು ಬಿಜೆಪಿ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಧರ ಏರಿಕೆ ಮಾಡುತ್ತಾ ಜನಸಾಮಾನ್ಯರ ಮೇಲೆ ಬರೆ ಎಳೆದಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿವೆ. ಅಧಿಕಾರದ ಲಾಲಸೆಯಿಂದಾಗಿ ರಾಜ್ಯದಲ್ಲಿ ಪ್ರವಾಹ ಬಂದು ಜನರು ತತ್ತರಿಸಿದ್ದರೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಮತ್ತು ಸಚಿವರು ಕುರ್ಚಿ ಉಳಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಜನಸಾಮಾನ್ಯರಿಗೆ ಗುರುತರವಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರದೆ ಕೊರೋನಾ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆದು ದೊಡ್ಡ ಸಾಧನೆ ಮಾಡಿದ್ದಾರೆ. ಕಾರ್ಯಕರ್ತರು ಜಾಗೃತರಾಗಬೇಕು. ಬಿಜೆಪಿ ಭ್ರಷ್ಟಾಚಾರವನ್ನು ಜನಸಾಮಾನ್ಯರಿಗೆ ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲ ಪಡಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಉಸ್ತುವಾರಿಗಳಾದ ಆಡಿಟರ್ ನಾಗರಾಜ್, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟೇಲ್ ಜಿ ಪಾಪನಾಯಕ, ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು, ಮೊಳಕಾಲ್ಮೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎನ.ಕೆ.ದಾದಪೀರ್, ತಳಕು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ದೂಡ್ಡ ಉಳ್ಳಾರ್ತಿ, ಚಿತ್ರದುರ್ಗ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ತಾಜ್ ಪೀರ್, ಕಾರ್ಯಧ್ಯಕ್ಷರಾದ ಹಾಲೇಶ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಜಯಮ್ಮ ಬಾಲರಾಜ್, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಬಾಲರಾಜ್, ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೇಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರು ಈ ಮಧು ತೊರೆಕೋಲಮ್ಮನಹಳ್ಳಿ, ನವೀನ್, ಮೊಳಕಾಲ್ಮೂರು ಪಟ್ಟಣ ಪಂಚಾಯತಿ ಸದಸ್ಯರು, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಎಲ್ಲಾ ಘಟಕದ ಪದಾಧಿಕಾರಿಗಳು, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಮುಖಂಡರು, ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎಚ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
