;

ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಾಸಾಚರಣೆ…!!!

ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಾಸಾಚರಣೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಳ್ಳಿ ಹೋಬಳಿಯ ಹೂಡೇ ಪ್ರಾಥಮಿಕ ಆರೋಗ್ಯ ಕೇಂದ್ರದ ಹೂಡೇ ( ಬುಧವಾರದಂದು) ರಾಷ್ಟ್ರೀಯ ಡೆಂಗ್ಯೂ ವಿರೋಧಿ ಮಾಸಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೀಟಜನ್ಯ ರೋಗಗಳು ಬಾರದಂತೆ ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರಿನ ಸಂಗ್ರಹಣೆಯ ಪರಿಕರಗಳನ್ನು ಮೇಲಿಂದ ಮೇಲೆ ಸ್ವಚ್ಛಗೊಳಿಸುತ್ತಿರಬೇಕು. ತ್ಯಾಜ್ಯ ವಸ್ತುಗಳ ಶೀಘ್ರ ವಿಲೇವಾರಿಯಿಂದ ರೋಗಗಳನ್ನು ತಡೆಯಬಹುದಾಗಿದೆ. ಎಲ್ಲರೂ ವಾರದಲ್ಲಿ ಒಂದು ದಿನವನ್ನು ಸ್ವಚ್ಚಾತಾ ಕಾರ್ಯಕ್ಕೆ ಮೀಸಲಿಟ್ಟು, ಸ್ವಚ್ಛತೆಯನ್ನು ಕೈಗೊಳ್ಳುವುದು ಅವಶ್ಯ ಎಂದು ಹೇಳಿದರು

ಹೊಡೇಪ್ರಾಥಮಿಕ ಆರೋಗ್ಯ ಕೇಂದ್ರದ ಡಾ ಶಿವಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಡೆಂಗ್ಯೂ ಜ್ವರ ಇದೊಂದು ಮಾರಣಾಂತಿಕ ಕಾಯಿಲೆಯಾಗಿದ್ದು, ಸೊಳ್ಳೆಗಳಿಂದ ಹರಡುತ್ತದೆ. ಡೆಂಗೀ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ ಎಂಬ ಘೋಷವಾಕ್ಯದಂತೆ, ಪ್ರತಿಯೊಬ್ಬರೂ ಸೊಳ್ಳೆಗಳ ನಿಯಂತ್ರಣದಲ್ಲಿ ತಮ್ಮ ತಮ್ಮ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿದಲ್ಲಿ ಈ ರೋಗವನ್ನು ತಡೆಯಬಹುದಾಗಿದೆ ಎಂದು ಹೇಳಿದರು. ಡೆಂಗ್ಯೂ ವಿರೋಧಿ ಮಾಸಾಚರಣೆ ಆಚರಿಸುತ್ತಿದ್ದು ಈ ಅವಧಿಯಲ್ಲಿ ಎಲ್ಲ ಗ್ರಾಮಗಳಲ್ಲಿ, ಶಾಲೆಗಳಲ್ಲಿ, ಗುಂಪುಸಭೆಗಳಲ್ಲಿ ಡೆಂಗ್ಯೂ ರೋಗದ ಕುರಿತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ಡೆಂಗ್ಯೂ ರೋಗಕ್ಕೆ ಕಾರಣವಾಗುವ ವೈರಸ್, ರೋಗ ಹರಡುವ ಈಡೀಸ್ ಇಜಿಪ್ಟೈ ಸೊಳ್ಳೆ, ಮನೆಗಳಲ್ಲಿ ನೀರಿನ ಪರಿಕರಗಳಲ್ಲಿ, ಮನೆಯ ಸುತ್ತ ಬೀಸಾಡಿದ ತ್ಯಾಜ್ಯ ವಸ್ತುಗಳಲ್ಲಿ ನಿಂತ ನೀರು ಹಾಗೂ ಮನೆಯ ಸುತ್ತ ನಿಂತ ನೀರಿನ ಗುಂಡಿಗಳಲ್ಲಿ ಸೊಳ್ಳೆ ಮರಿ ಅಭಿವೃದ್ಧಿಯಾಗುತ್ತಿದ್ದು, ಇವುಗಳನ್ನು ವಾರದಲ್ಲಿ ಕನಿಷ್ಠ ಎರಡು ಬಾರಿ ಸ್ವಚ್ಛಗೊಳಿಸುವದು ಹಾಗೂ ತ್ಯಾಜ್ಯ ವಸ್ತುಗಳನ್ನು ಬೇಗನೆ ವಿಲೇವಾರಿ ಮಾಡುವ ಮೂಲಕ ಸೊಳ್ಳೆಗಳ ನಿಯಂತ್ರಣ ಮಾಡಬಹುದು ಎಂದರು. ಸೊಳ್ಳೆಗಳ ಕಡಿತದಿಂದ ಪಾರಾಗಲು ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು, ಬೇವಿನ ಸೊಪ್ಪಿನ ಹೊಗೆ ಹಾಕುವುದು, ಕಿಟಕಿಗಳಿಗೆ ಜಾಲರಿ ಅಳವಡಿಸುವುದು, ಲಾರ್ವ ನಾಶಕ ಉಪಯೋಗ, ನೀರು ನಿಲ್ಲುವಂತ ಸ್ಥಳಗಳಲ್ಲಿ ಜೈವಿಕ ವಿಧಾನ ಲಾರ್ವಹಾರಿ ಮೀನುಗಳಾದ ಗಪ್ಪಿಮೀನು,ಗಂಬೂಸಿಯಾ ಮೀನು ಬಿಡುವ ಕುರಿತು ವಿವರವಾಗಿ ಹೇಳಿದರು. ಸೊಳ್ಳೆಗಳಿಂದ ಹರಡುವ ಕಾಯಿಲೆಗಳಾದ ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ, ಆನೆಕಾಲು ರೋಗ ಹಾಗೂ ಮೆದುಳು ಜ್ವರ ಕಾಯಿಲೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಹಗಲು ಹಾಗೂ ರಾತ್ರಿ ಮಲಗುವಾಗ ತಪ್ಪದೇ ಸೊಳ್ಳೆ ಪರದೆಗಳನ್ನು ಉಪಯೋಗಿಸಬೇಕು ಎಂದು ಹೇಳಿದರು.ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಧರ್ಮಸಿಂಗ್ ಇವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಕಾಯಿಲೆಗಳ ನಿಯಂತ್ರಣದಲ್ಲಿ ವೈದ್ಯಕೀಯ ಚಿಕಿತ್ಸೆಯಷ್ಟೇ ಆರೋಗ್ಯ ಶಿಕ್ಷಣವೂ ಅಗತ್ಯವಾಗಿದ್ದು, ಕೀಟಜನ್ಯ ರೋಗಗಳು ಬಾರದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಅರೋಗ್ಯ ಇಲಾಖೆಯು ಆಯೋಜಿಸಿರುವ ಇಂತಹ ಕಾರ್ಯಕ್ರಮಗಳ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದರು.

ಇದೇ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಚಂದ್ರಪ್ಪ.ಭಾಗ್ಯಮ್ಮ. ಮಂಗಳ. ಲಿಂಗರಾಜ. ಇತರರು ಉಪಸ್ಥಿತರಿದ್ದರು ಮತ್ತು
ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು.ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..

ವರದಿ. ವಿರೇಶ್, ಕೆ, ಎಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;