;

ಮೊಳಕಾಲ್ಮೂರು: ನೇರ್ಲಹಳ್ಳಿ ಆಷಾಢ ಮಾಸದ ಹೋಳಿಗೆಮ್ಮ ಹಬ್ಬ.!!

ಚಿತ್ರದುರ್ಗ ಮೊಳಕಾಲ್ಮೂರು ತಾಲೂಕಿನ ನೇರ್ಲಹಳ್ಳಿ ಗ್ರಾಮದಲ್ಲಿ ಹೋಳಿಗೆ ಅಮ್ಮನ ಪೂಜೆಗಾಗಿ ಮನೆಯಲ್ಲಿ ಮಹಿಳೆಯರು, ಯುವತಿಯರು ಬೆಳಗ್ಗೆಯಿಂದ ಉಪವಾಸವಿದ್ದು ನೇಮದಿಂದ ತಯಾರಿಸಿದ ಹೋಳಿಗೆ, ಅನ್ನ, ಎಡೆಯೊಂದಿಗೆ ಅಡಕೆ ತಟ್ಟೆ ಅಥವಾ ಊಟದ ಎಲೆಗಳಲ್ಲಿ, ಮಣ್ಣಿನ ಕುಡಿಕೆಯಲ್ಲಿ ಬೇವಿನ ಸೊಪ್ಪು ಇಟ್ಟು, ಅರಿಶಿನ ಕುಂಕುಮ, ಬಳೆ, ತೆಂಗಿನ ಕಾಯಿ, ಬಾಳೆಹಣ್ಣು ಅರ್ಪಿಸುವ ಮೂಲಕ ಅಮ್ಮನ ಪೂಜೆ ನೆರವೇರಿಸಿದರು. ಮನೆಯಲ್ಲಿರುವ ಮಕ್ಕಳಿಗೆ ಅಮ್ಮ, ದಡಾರ, ಪ್ಲೇಗ್‌, ಸಿಡುಬು ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ, ದುಷ್ಟಶಕ್ತಿ ಊರೊಳಗೆ ಬಾರದಂತೆ ಹಾಗೂ ಕಾಲಕಾಲಕ್ಕೆ ಮಳೆ ಆಗುವುದಕ್ಕಾಗಿ ಹುಟ್ಟಿಕೊಂಡಿದ್ದೇ ಈ ಹೋಳಿಗೆ ಅಮ್ಮ. ಈ ಹಬ್ಬವನ್ನು ಹಿರಿಯರಿಂದ ಕಿರಿಯರವರೆಗೂ ಭಯ, ಭಕ್ತಿಯಿಂದ ಆಚರಿಸುತ್ತಾರೆ…

ವರದಿ.ಮಂಜುನಾಥ್, ಎಚ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;