;

ಹಿರಿಯೂರು:- ನೆಚ್ಚಿನ ನಾಯಕಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ, ಅಭಿಮಾನಿಗಳಿಂದ ಸರ್ಕಾರದ ನಡವಳಿಕೆ ವಿರುದ್ಧ ಪ್ರತಿಭಟನೆ…!!!

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಂಪುಟ ವಿಸ್ತರಣೆ ಮಾಡಿದರು. 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಬುಧವಾರದ ತನಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸಂಭವನೀಯ ಸಚಿವರ ಪಟ್ಟಿಯಲ್ಲಿ ಪೂರ್ಣಿಮಾ ಶ್ರೀನಿವಾಸ್ ಹೆಸರಿತ್ತು. ಬುಧವಾರ ಬೆಳಗ್ಗೆ ಸಹ ಶಾಸಕರ ಮನೆಗೆ ಅವರ ಅಭಿಮಾನಿಗಳು ಆಗಮಿಸಿ ಶುಭ ಕೋರಿದ್ದರು. ಆದರೆ, ಪಟ್ಟಿ ಬಿಡುಗಡೆ ಬಳಿಕ ಆಗಿದ್ದೇ ಬೇರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸಂಪುಟಕ್ಕೆ ಮಹಿಳಾ ಕೋಟಾದಡಿ ಶಶಿಕಲಾ ಜೊಲ್ಲೆ ಸೇರ್ಪಡೆಗೊಂಡಿದ್ದಾರೆ. ಇದರಿಂದಾಗಿ ಪೂರ್ಣಿಮಾ ಶ್ರೀನಿವಾಸ್ ಬೆಂಬಲಿಗರು ಹಾಗೂ ಅಭಿಮಾನಿಗಳು ಆಕ್ರೋಶಗೊಂಡರು.ರಾಜ್ಯಾದ್ಯಂತ ನಮ್ಮ ಸಮುದಾಯವನ್ನು ಸಂಘಟನೆ ಮಾಡಿಕೊಂಡು ಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಡ್ಡು ಹೊಡೆಯುತ್ತೆವೆ. ಇದಲ್ಲದೆ ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆ ಮಣೆ ಹಾಕಲಾಗಿದೆ. ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು.

ಧರ್ಮಪುರ ಹೋಬಳಿಯಲ್ಲಿ ಸಹ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಬಿಜೆಪಿ ಪ್ರತಿಭಟನೆಯಿಂದಾಗಿ ಒಂದು ಕಿಲೋ ಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು..

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;